ಬುಧವಾರದಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ಹೈ ಅಲರ್ಟ್!

0
Spread the love

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜೂನ್ 11 ರಿಂದ ಮತ್ತೆ ಮಳೆ ಆರ್ಭಟ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್‌ ನೀಡಲಾಗಿದೆ. ಜೂ.12ಕ್ಕೆ ವಿಜಯನಗರ, ಕೊಡಗು, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ರಾಜ್ಯಗಳಾದ ಕೇರಳ, ಕರಾವಳಿ ಕರ್ನಾಟಕದಲ್ಲಿ ವಾರವಿಡೀ ಮಳೆಯಾಗುವ ಸಾಧ್ಯತೆಯಿದೆ.

Advertisement

ಶಿವಮೊಗ್ಗ, ಹಾಸನದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು, ಬೆಂಗಳೂರಿನ ಒಂದು ಅಥವಾ ಎರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಮತ್ತು ಮೈಸೂರು, ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆ, ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.


Spread the love

LEAVE A REPLY

Please enter your comment!
Please enter your name here