ರಾಯಚೂರು:- ಭಾರೀ ಮಳೆ ಹಿನ್ನೆಲೆ ಬಸವಸಾಗರ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕೃಷ್ಣೆಯು ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆ ಲಿಂಗಸುಗೂರುತಾಲೂಕಿನ ಶೀಲಹಳ್ಳಿ ಸೇತುವೆ ಪುನಃ ಮುಳುಗಡೆಯಾಗಿದೆ.
Advertisement
ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಡ್ಯಾಂನಿಂದ 1.55 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ರಿಲೀಸ್ ಮಾಡಲಾಗಿದೆ. ಹೀಗಾಗಿ ಶೀಲಹಳ್ಳಿ ಸೇತುವೆ ಮತ್ತೆ ಮುಳುಗಡೆಯಾಗಿದೆ. ಇದರಿಂದ ಲಿಂಗಸುಗೂರು ತಾಲೂಕಿನ ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದ್ದು, ಶೀಲಹಳ್ಳಿ, ಹಂಚಿನಾಳ,
ಯರಗೋಡಿ ಸಂಪರ್ಕ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ. ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿಂದ ರೈತರ ಪಂಪ್ ಸೆಟ್ಗಳು ನೀರಲ್ಲಿ ಮುಳುಗಡೆಯಾಗಿವೆ.