ಮಳೆ ಅವಾಂತರ: ಸಿಡಿಲು ಬಡಿದು ಯುವಕ ಸಾವು!

0
Spread the love

ಬಳ್ಳಾರಿ:– ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

18 ವರ್ಷದ ಪಾಂಡುನಾಯ್ಕ್ ಮೃತ ಯುವಕ. ಗುರುವಾರ ಸಂಜೆ ಗ್ರಾಮದಲ್ಲಿ ಭಾರೀ ಮಳೆಯಾಗಿದ್ದು, ಮಳೆ ಬರುತ್ತಿದ್ದ ಸಮಯದಲ್ಲಿ ಪಾಂಡುನಾಯ್ಕ್ ಮನೆ ಬಳಿ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸಿಡಿಲಿನ ತೀವ್ರತೆಗೆ ಮನೆಯ ಗೋಡೆಗಳಿಗೆ ಹಾನಿಯಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here