ಫಸ್ಟ್ ರ್ಯಾಂಕ್ ರಾಜು ಖ್ಯಾತಿಯ ಗುರುನಂದನ್ ನಟನೆಯ ಬಹು ನಿರೀಕ್ಷಿತ ‘ರಾಜು ಜೇಮ್ಸ್ ಬಾಂಡ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಪಕ್ಕ ಎಂಟಟೇನ್ ಮೆಂಟ್ ಚಿತ್ರವಾಗಿರುವ ರಾಜು ಜೇಮ್ಸ್ ಬಾಂಡ್ ಇದೇ ಫೆಬ್ರವರಿ 14 ರಂದು ಬಿಡುಗಡೆಗೆ ಸಜ್ಜಾಗಿದೆ.
ರಾಜು ಜೇಮ್ಸ್ ಬಾಂಡ್ ಬಿಡುಗಡೆಯ ಹಿನ್ನೆಲೆಯಲ್ಲಿ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇಂದು ನಡೆಯಲಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಹಾಗೂ ಸ್ಯಾಂಡಲ್‌ವುಡ್ ನಟಿ ರಮ್ಯಾ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ರಾಜು ಜೇಮ್ಸ್ ಬಾಂಡ್ ಚಿತ್ರವನ್ನು ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು (ಕೆನಡಾ) ನಿರ್ಮಿಸಿದ್ದಾರೆ. ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ ‘ಫಸ್ಟ್ Rank ರಾಜು’ ಖ್ಯಾತಿಯ ಗುರುನಂದನ್ ನಾಯಕನಾಗಿ ನಟಿಸಿದ್ದಾರೆ.
ಗುರುನಂದನ್ ಈ ಚಿತ್ರದ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿಯಾಗಿ ಮೃದುಲ ಅಭಿನಯಿಸಿದ್ದಾರೆ. ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ನಟಿಸಿದ್ದಾರೆ. ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ ಫೆಬ್ರವರಿ 14 ರಂದು ರಾಜು ಜೇಮ್ಸ್ ಬಾಂಡ್ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.