• About
  • Advertise
  • Privacy & Policy
  • Contact
Sunday, November 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಸಾಧಕರನ್ನು ಅರಸಿ ಬಂದ ರಾಜ್ಯೋತ್ಸವ ಪ್ರಶಸ್ತಿ: ಮುಂಡರಗಿಯಲ್ಲಿ ನಾಡೋಜ ಶ್ರೀಗಳಿಗೆ ಗೌರವ

Vijaya Sakshi News Desk by Vijaya Sakshi News Desk
November 29, 2026
in Gadag News
ಸಾಧಕರನ್ನು ಅರಸಿ ಬಂದ ರಾಜ್ಯೋತ್ಸವ ಪ್ರಶಸ್ತಿ: ಮುಂಡರಗಿಯಲ್ಲಿ ನಾಡೋಜ ಶ್ರೀಗಳಿಗೆ ಗೌರವ
0
SHARES
6
VIEWS
Share on Facebook

ಮುಂಡರಗಿ: ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಎಂದರೆ ಬೆಂಗಳೂರಿನಲ್ಲಿ ನಡೆಯುವ ಅದ್ಧೂರಿ ಸಮಾರಂಭ ನೆನಪಾಗುತ್ತದೆ. ಆದರೆ ಈ ಬಾರಿ ರಾಜ್ಯ ಸರ್ಕಾರ ಪ್ರಶಸ್ತಿ ಪುರಸ್ಕೃತರ ಬಳಿಗೇ ತೆರಳಿ ಗೌರವಿಸುವ ವಿಶೇಷ ಕ್ರಮ ಕೈಗೊಂಡಿದೆ. ಅದರಂತೆ ಗದಗ ಜಿಲ್ಲೆಯ ಮುಂಡರಗಿಯ ನಾಡೋಜ ಜಗದ್ಗುರು ಅನ್ನದಾನೀಶ್ವರ ಶ್ರೀಗಳಿಗೆ 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಮುಂಡರಗಿಯಲ್ಲಿಯೇ ಪ್ರದಾನ ಮಾಡಲಾಯಿತು.

ಮುಂಡರಗಿಯ ಅನ್ನದಾನೇಶ್ವರ ಮಹಾವಿದ್ಯಾಲಯದ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಅವರು ಸರ್ಕಾರದ ಪರವಾಗಿ ಶ್ರೀಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಮಠಗಳ ಶಿಕ್ಷಣ ಸೇವೆ ಸಮಾಜಕ್ಕೆ ದೊಡ್ಡ ಕೊಡುಗೆ

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸಚಿವ ಬಸವರಾಜ ರಾಯರಡ್ಡಿ, ರಾಜ್ಯದ ಶಿಕ್ಷಣ ಕ್ಷೇತ್ರದ ಬೆಳವಣಿಗೆಯಲ್ಲಿ ಮಠಮಾನ್ಯಗಳ ಪಾತ್ರ ಮಹತ್ವದ್ದಾಗಿದೆ. ಮಠಗಳು ಕೇವಲ ಧಾರ್ಮಿಕ ಬೋಧನೆಗೆ ಸೀಮಿತವಾಗದೆ, ಕಾಯಕ, ದಾಸೋಹ ಹಾಗೂ ಶಿಕ್ಷಣದ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿಗೆ ಆಸರೆಯಾಗಿವೆ. ಹಿಂದುಳಿದ ಪ್ರದೇಶಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಜ್ಞಾನದ ಬೆಳಕು ಹರಿಸಿರುವ ಅನ್ನದಾನೀಶ್ವರ ಶ್ರೀಗಳ ಸೇವೆ ಶ್ಲಾಘನೀಯ ಎಂದರು.

ಕರ್ನಾಟಕದ ಸಾಕ್ಷರತಾ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವುದರಲ್ಲಿ ಶಿಕ್ಷಣ ಸೇವಾ ಸಂಸ್ಥೆಗಳ ಕೊಡುಗೆಯೂ ಇದೆ. ದೇಶದಲ್ಲೇ ಅತಿ ಹೆಚ್ಚು ವೈದ್ಯರನ್ನು ರೂಪಿಸುತ್ತಿರುವ ಕರ್ನಾಟಕ, ಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಬೆಂಗಳೂರೊಂದರಲ್ಲೇ 27 ಲಕ್ಷ ಎಂಜಿನಿಯರ್‌ಗಳು ಕಾರ್ಯನಿರ್ವಹಿಸುತ್ತಿರುವುದು ರಾಜ್ಯದ ಶೈಕ್ಷಣಿಕ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದರು.

440 ಕಾಲೇಜುಗಳಿಗೆ ಕಾಯಂ ಪ್ರಾಚಾರ್ಯರ ನೇಮಕ

ರಾಜ್ಯದ 440 ಸರ್ಕಾರಿ ಪದವಿ ಕಾಲೇಜುಗಳಿಗೆ ಶೀಘ್ರದಲ್ಲೇ ಕಾಯಂ ಪ್ರಾಚಾರ್ಯರನ್ನು ನೇಮಕ ಮಾಡಲಾಗುವುದು. ಇದರ ಜತೆಗೆ ವಿಶ್ವವಿದ್ಯಾಲಯಗಳಿಗೆ 1 ಸಾವಿರ ಉಪನ್ಯಾಸಕರು ಹಾಗೂ 2 ಸಾವಿರ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಲಾಗುವುದು ಎಂದು ಸಚಿವರು ಘೋಷಿಸಿದರು.

ಶ್ರೀಗಳ ಶಿಕ್ಷಣ ಸೇವೆಯನ್ನು ಸ್ಮರಿಸಿದ ಅವರು, ಕಾಲೇಜು ಕಟ್ಟಡ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ ನೀಡುವ ಕುರಿತು ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ಕುಕನೂರು ಎಪಿಎಂಸಿಗೆ ಶ್ರೀಗಳು 19 ಎಕರೆ ಜಮೀನು ದಾನ ಮಾಡಿರುವುದನ್ನು ಉಲ್ಲೇಖಿಸಿ, ಮಾರುಕಟ್ಟೆಗೆ ‘ನಾಡೋಜ ಜ. ಅನ್ನದಾನೀಶ್ವರ ಮಾರುಕಟ್ಟೆ’ ಎಂದು ನಾಮಕರಣ ಮಾಡಲು ಎರಡು ತಿಂಗಳ ಹಿಂದೆಯೇ ನಿರ್ಧರಿಸಲಾಗಿದೆ. ಮುಂಡರಗಿ ತಾಲೂಕು ಆಸ್ಪತ್ರೆಗೆ ಕೂಡ ಶ್ರೀಗಳ ಹೆಸರಿಡುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.

ನೀರಾವರಿ, ಕಾಲೇಜು ಸ್ಥಾಪನೆಗೆ ಶಾಸಕರ ಆಗ್ರಹ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ತುಂಗಭದ್ರಾ ನದಿ ಹರಿಯುತ್ತಿದ್ದರೂ ಶಿರಹಟ್ಟಿ ಕ್ಷೇತ್ರದ ಬಹುಭಾಗ ನೀರಾವರಿಯಿಂದ ವಂಚಿತವಾಗಿದೆ. ಕ್ಷೇತ್ರವನ್ನು ಸಂಪೂರ್ಣ ನೀರಾವರಿಗೆ ಒಳಪಡಿಸುವ ಜತೆಗೆ ಬೆಳ್ಳಟ್ಟಿಯಲ್ಲಿ ಪದವಿ ಕಾಲೇಜು ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳನ್ನು ಮಂಜೂರು ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಹಿಂದುಳಿದ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿರುವ ಅನ್ನದಾನೀಶ್ವರ ಶ್ರೀಗಳು ಮುಂಡರಗಿಯ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಆಸ್ಪತ್ರೆಗೆ ಜಾಗ ದಾನ ಮಾಡಿದ್ದಾರೆ. ಈ ಸಂಸ್ಥೆಗಳಿಗೆ ಶ್ರೀಗಳ ಹೆಸರನ್ನೇ ನಾಮಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಕನ್ನಡದ ವೈಭವ ಸಾರಿದ ಅದ್ಧೂರಿ ಮೆರವಣಿಗೆ

ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ಮುನ್ನ ಮುಂಡರಗಿ ಪಟ್ಟಣದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಅನ್ನದಾನೀಶ್ವರ ಸಂಸ್ಥಾನಮಠದಿಂದ ಆರಂಭವಾದ ಮೆರವಣಿಗೆಯಲ್ಲಿ ಸಾರೋಟಿನಲ್ಲಿ ಭುವನೇಶ್ವರಿ ದೇವಿಯ ಮೂರ್ತಿ ಹಾಗೂ ಪ್ರಶಸ್ತಿ ಪುರಸ್ಕೃತ ಜಗದ್ಗುರುಗಳನ್ನು ಕರೆದೊಯ್ಯಲಾಯಿತು. ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳ ಪ್ರದರ್ಶನ ಮೆರವಣಿಗೆಗೆ ಮೆರುಗು ನೀಡಿತು. ವಿದ್ಯಾರ್ಥಿಗಳ ಕೈಯಲ್ಲಿ ಕನ್ನಡದ ಬಾವುಟಗಳು ರಾರಾಜಿಸಿದವು. ಮಾರ್ಗದುದ್ದಕ್ಕೂ ಭುವನೇಶ್ವರಿ ದೇವಿಯ ಮೂರ್ತಿ ಹಾಗೂ ಶ್ರೀಗಳ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು. ಮಹಿಳೆಯರು, ವಿದ್ಯಾರ್ಥಿಗಳು, ಗಣ್ಯರು, ನಾಗರಿಕರು ಹಾಗೂ ಸಾವಿರಾರು ಭಕ್ತರು ಪಾಲ್ಗೊಂಡು ಶ್ರೀಗಳಿಗೆ ಗೌರವ ಸಲ್ಲಿಸಿದರು. ಇಡೀ ಮುಂಡರಗಿ ಪಟ್ಟಣ ಕನ್ನಡದ ಸಂಭ್ರಮದಲ್ಲಿ ಮಿಂದೆದ್ದಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅನ್ನದಾನೀಶ್ವರ ಶ್ರೀಗಳು, ಹಿಂದುಳಿದ ಪ್ರದೇಶಗಳಲ್ಲಿ ಸಾಕಷ್ಟು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಬೆಳೆಸಿದ್ದೇವೆ. ನಮ್ಮ ಶಿಕ್ಷಣ ಸಂಸ್ಥೆಗಳಲ್ಲಿ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಅಚ್ಚುಕಟ್ಟಾದ ಸಂಘಟನೆಯಿಂದ ಗಮನ ಸೆಳೆದ ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಅವರು ಸಮಾರಂಭದ ಆಯೋಜನೆ ಹಾಗೂ ನಿರ್ವಹಣೆಯಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದರು. ಗಣ್ಯರು, ಕಲಾತಂಡಗಳು, ವಿದ್ಯಾರ್ಥಿಗಳು ಹಾಗೂ ಸಾವಿರಾರು ಭಕ್ತರು ಪಾಲ್ಗೊಂಡಿದ್ದ ಕಾರ್ಯಕ್ರಮದ ಎಲ್ಲ ವ್ಯವಸ್ಥೆಗಳನ್ನು ಸಮನ್ವಯಗೊಳಿಸಿ, ಮೆರವಣಿಗೆಯಿಂದ ಪ್ರಶಸ್ತಿ ಪ್ರದಾನ ಸಮಾರಂಭದವರೆಗೆ ಪ್ರತಿಯೊಂದು ಹಂತವೂ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಂಡರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸ್ವಾಗತಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಶ್ರೀ ಎನ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ದುರುಗೇಶ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಅನ್ನದಾನೀಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಬಿ.ಜಿ. ಜವಳಿ, ರುದ್ರಗೌಡ ಪಾಟೀಲ, ಡಿ.ಡಿ. ಮೋರನಾಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಬಾಹುಬಲಿ ಜೈನರ್ ಕಾರ್ಯಕ್ರಮ ನಿರೂಪಿಸಿದರು.

“ಮಠಗಳು ಕೇವಲ ಧಾರ್ಮಿಕ ಬೋಧನೆಗೆ ಸೀಮಿತವಾಗದೆ, ಕಾಯಕ, ದಾಸೋಹ ಹಾಗೂ ಶಿಕ್ಷಣದ ಮೂಲಕ ಬಡ ಮತ್ತು ಮಧ್ಯಮ ವರ್ಗದವರಿಗೆ ಆಸರೆಯಾಗಿವೆ.”

— ಬಸವರಾಜ ರಾಯರಡ್ಡಿ, ಉನ್ನತ ಶಿಕ್ಷಣ ಸಚಿವರು

Tags: Annadaneshwara MuttBasavaraj Rayareddygadag newsKannada and Culture DepartmentKarnataka governmentKarnataka Rajyotsava Award 2026MundargiNadoja Annadaneshwara ShriVijayasakshi
ShareSendShare
Previous Post

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

Next Post

Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

Vijaya Sakshi E-Paper 29 Nov 2026
29 Nov 2026
Read E-Paper
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

November 29, 2026
ಸಾಧಕರನ್ನು ಅರಸಿ ಬಂದ ರಾಜ್ಯೋತ್ಸವ ಪ್ರಶಸ್ತಿ: ಮುಂಡರಗಿಯಲ್ಲಿ ನಾಡೋಜ ಶ್ರೀಗಳಿಗೆ ಗೌರವ

ಸಾಧಕರನ್ನು ಅರಸಿ ಬಂದ ರಾಜ್ಯೋತ್ಸವ ಪ್ರಶಸ್ತಿ: ಮುಂಡರಗಿಯಲ್ಲಿ ನಾಡೋಜ ಶ್ರೀಗಳಿಗೆ ಗೌರವ

November 29, 2026

23 ವರ್ಷ ದೇಶಸೇವೆ ಸಲ್ಲಿಸಿ ಡಿ.1ರಂದು ತಾಯ್ನಾಡಿಗೆ ಮರಳಲಿರುವ ವೀರಯೋಧ ಮೈಬುಸಾಬ ಹೆಬ್ಬಳ್ಳಿ

November 28, 2026
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026

Recent News

Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

November 29, 2026
1

8
ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕ್ಷೇತ್ರ ಪುನರ್ವಿಂಗಡಣೆ ಹಿಂದೆ ಮೋದಿ ರಾಜಕೀಯ ಲೆಕ್ಕಾಚಾರ? ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ!

November 28, 2026
5
Vijaya Sakshi News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

Bengaluru News: ಆನೆ ದಂತ ಕಳ್ಳಸಾಗಣೆ ಜಾಲಕ್ಕೆ ಖಾಕಿ ಶಾಕ್! ಮೂವರು ಆರೋಪಿಗಳು ಅಂದರ್

November 29, 2026
ಸಾಧಕರನ್ನು ಅರಸಿ ಬಂದ ರಾಜ್ಯೋತ್ಸವ ಪ್ರಶಸ್ತಿ: ಮುಂಡರಗಿಯಲ್ಲಿ ನಾಡೋಜ ಶ್ರೀಗಳಿಗೆ ಗೌರವ

ಸಾಧಕರನ್ನು ಅರಸಿ ಬಂದ ರಾಜ್ಯೋತ್ಸವ ಪ್ರಶಸ್ತಿ: ಮುಂಡರಗಿಯಲ್ಲಿ ನಾಡೋಜ ಶ್ರೀಗಳಿಗೆ ಗೌರವ

November 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper