ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಾಯಕ ನಟನಾಗಿ ಅಭಿನಯ ಮಾಡಿರುವ ಮೊಟ್ಟ ಮೊದಲ ಸಿನಿಮಾ ಅಪ್ಪು, ಇಂದು ರಾಜ್ಯಾದ್ಯಂತ ಮರು ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಹಲವಾರು ಚಿತ್ರಮಂದಿರಗಳಲ್ಲಿ ‘ಅಪ್ಪು’ ಸಿನಿಮಾ ರೀ-ರಿಲೀಸ್ ಮಾಡಲಾಗಿದೆ.
ಈ ಹಿನ್ನೆಲೆ ಬೆಂಗಳೂರಿನ ವೀರೇಶ್ ಚಿತ್ರಮಂದಿರದಲ್ಲಿ ‘ಅಪ್ಪು’ ಚಿತ್ರವನ್ನು ರಕ್ಷಿತಾ ವೀಕ್ಷಿಸಿದ್ದಾರೆ. ಅಭಿಮಾನಿಗಳೊಂದಿಗೆ ರಕ್ಷಿತಾ ‘ಅಪ್ಪು’ ಚಿತ್ರ ನೋಡಿ ರಂಜಿಸಿದ್ದಾರೆ. ಈ ವೇಳೆ, ಅರಸು, ಆಕಾಶ್ ಚಿತ್ರಗಳ ನಿರ್ದೇಶಕ ಮಹೇಶ್ ಬಾಬು ಕೂಡ ಸಾಥ್ ನೀಡಿದ್ದಾರೆ.
‘ಬಿಗ್ ಬಾಸ್’ ಸ್ಪರ್ಧಿಗಳಾದ ಕಿಶನ್, ರಕ್ಷಕ್ ಬುಲೆಟ್, ಕಾರ್ತಿಕ್ ಮಹೇಶ್, ನಮ್ರತಾ ಗೌಡ ಕೂಡ ‘ಅಪ್ಪು’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಮತ್ತೊಮ್ಮೆ ಪುನೀತ್ ಸಿನಿಮಾ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಅಪ್ಪು ಎಂಟ್ರಿಗೆ ಶಿಳ್ಳೆ, ಚಪ್ಪಾಳೆ ಹೊಡೆಯುತ್ತಾ ಎಂಜಾಯ್ ಮಾಡಿದ್ದಾರೆ.