ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು: ಉಪಮುಖ್ಯಂತ್ರಿ ಡಿಕೆಶಿ ಭರವಸೆ!

0
Spread the love

ಬೆಂಗಳೂರು:- ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು ಇಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ಕೊಟ್ಟಿದ್ದಾರೆ.

Advertisement

ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮ ಇಂದು ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಡಿಕೆಶಿ, ಈ ಮೇಲಿನ ಭರವಸೆ ನೀಡಿದ್ದಾರೆ. ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು. ಇದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.

ರಾಮಕೃಷ್ಣ ಹೆಗಡೆ ಅವರಲ್ಲಿ ಕ್ಷಮಿಸುವ ಗುಣ, ಹೃದಯ ಶ್ರೀಮಂತಿಕೆ ಇತ್ತು. ನಾವು ಎಂದಿಗೂ ಅವರಲ್ಲಿ ದ್ವೇಷ ರಾಜಕಾರಣ ನೋಡಲಿಲ್ಲ. ಇದು ನಮ್ಮೆಲ್ಲರಿಗೂ ದೊಡ್ಡ ಆದರ್ಶ. ಅವರದ್ದು ಪರಿಶುದ್ಧ ಆಡಳಿತ ಹಾಗೂ ರಾಜಕಾರಣ. ರಾಮಕೃಷ್ಣ ಹೆಗಡೆ ಅವರು ಕನಕಪುರದಿಂದ ಸ್ಪರ್ಧೆ ಮಾಡಿದ್ದರು. ಅವರನ್ನು ಸೋಲಿಸಲು ನಾನು ವಿದ್ಯಾರ್ಥಿ ನಾಯಕನಾಗಿ ಹೋರಾಟ ಮಾಡಿದ್ದೆ. ನನ್ನ ಹೋರಾಟ ಗಮನಿಸಿ 1985ರಲ್ಲಿ ಪಕ್ಷ ನನಗೆ ಟಿಕೆಟ್ ನೀಡಿತ್ತು. ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಆಗ ನನ್ನ ನಾಯಕತ್ವಕ್ಕೆ ಬೆಂಬಲ ಸಿಗಲಿಲ್ಲ ಎಂದು ಮತ್ತೆ ಚುನಾವಣೆಗೆ ಹೋದರು ಎಂದು ಮೆಲುಕು ಹಾಕಿದರು.


Spread the love

LEAVE A REPLY

Please enter your comment!
Please enter your name here