ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಇನ್ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾವಣೆ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,
Advertisement
ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲು ಸಂಪುಟ ಸಭೆ ಒಪ್ಪಿಗೆ ನೀಡಿದೆ, ಈ ಸಂಬಂಧ ಆದೇಶವೂ ಹೊರ ಬೀಳುತ್ತೆ ಅಂತ ಹೇಳಿದ್ದಾರೆ.
ರಾಮನಗರ ಜಿಲ್ಲಾ ಕೇಂದ್ರ ರಾಮನಗರದಲ್ಲೇ ಇರುತ್ತೆ, ಆದರೆ ಅದರ ಹೆಸರು ಮಾತ್ರ ಬದಲಾವಣೆ ಆಗುತ್ತೆ ಅಂತ ಡಿಕೆಶಿ ಹೇಳಿದ್ದಾರೆ. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು.