ರಾಮನಗರ:- ಕಾಡಾನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಹಾರೋಹಳ್ಳಿ ತಾಲೂಕಿನ ದುಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ.
48 ವರ್ಷದ ಪುಟ್ಟಮಾದೇಗೌಡ ಮೃತ ರೈತ. ಮುಂಜಾನೆ ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಪರಿಣಾಮ ರೈತ ಮಾದೇಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ, ಅರಣ್ಯಾಧಿಕಾರಿಗಳನ್ನ ತರಾಟೆ ತೆಗೆದುಕೊಂಡಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ಒತ್ತಾಯ ಮಾಡಿದ್ದಾರೆ.



