ಮುಕ್ತಿಮಂದಿರದಲ್ಲಿನ ಮಹಾಶಿವರಾತ್ರಿ ಜಾತ್ರಾಮಹೋತ್ಸವದಲ್ಲಿ ರಂಭಾಪುರಿ ಶ್ರೀಗಳು

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಮಹಾಶಿವರಾತ್ರಿ ಜಾತ್ರಾಮಹೋತ್ಸವ ಅಂಗವಾಗಿ ಫೆ.26ರಿಂದ 28ರವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಬುಧವಾರ ಪ್ರಾತಃಕಾಲ ಶ್ರೀ ಜಗದ್ಗುರು ಪಂಚಾಚಾರ್ಯ ದ್ವಜಾರೋಹಣ, ಲಿಂ. ವೀರಗಂಗಾಧರ ಜಗದ್ಗುರುಗಳ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ಶಿವದೀಕ್ಷೆ, ಅಯ್ಯಾಚಾರ, ಶ್ರೀ ಜಗದ್ಗುರುಗಳವರ ಮಂಗಳಮೂರ್ತಿಗೆ ಮಹಾರುದ್ರಾಭಿಷೇಕ, ಪಟ್ಟಾಧ್ಯಕ್ಷರ ಸಡಗರದ ಮಹಾಶಿವಪೂಜೆ, ನಾಮಸ್ಮರಣೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಿತು. ಗುರುವಾರ ವಿಶೇಷ ಪೂಜೆ, ಸಂಜೆ ಶಿವಪಾರ್ವತಿ ರಥೋತ್ಸವದ ಬಳಿಕ ಧರ್ಮಸಭೆ ನಡೆಯಲಿದೆ.

Advertisement

ಫೆ.28ರಂದು ಅಮವಾಸ್ಯೆ ವೃತಾಚರಣೆ, ಬೆಳಿಗ್ಗೆ ಶ್ರೀ ರಂಭಾಪುರಿ ಜಗದ್ಗುರುಗಳ ಕತೃ ಗದ್ದುಗೆಗೆ ಮಹಾಪೂಜಾ ಕೈಂಕರ್ಯಗಳು, ಮಧ್ಯಾಹ್ನ ಸುಲ್ತಾನಪುರ ಗ್ರಾಮಸ್ಥರಿಂದ ವಿಶ್ವಶಕ್ತಿ ಭಾವಚಿತ್ರದ ಮೆರವಣಿಗೆ, ಲಿಂ. ಜ. ವೀರಗಂಗಾಧರರ ಮಹಾಮಂಗಲ ಮೂರ್ತಿಯ ಅಡ್ಡಪಲ್ಲಕ್ಕಿ ಮಹೋತ್ಸವ, ಕಡುಬಿನ ಕಾಳಗ ಜರುಗಲಿದ್ದು, ಸಂಜೆ 5ಕ್ಕೆ ಮಹಾಶಿವರಾತ್ರಿ ಧರ್ಮಜಾಗೃತಿ ಸಮಾರಂಭ ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಸಾನ್ನಿಧ್ಯದಲ್ಲಿ ಜರುಗಲಿದೆ. ಮುಕ್ತಿಮಂದಿರ ಕ್ಷೇತ್ರದ ಪಟ್ಟಾಧ್ಯಕ್ಷರು, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಲಿದ್ದಾರೆ.

ನೊಣವಿನಕೆರೆ ಕಾಡಸಿದ್ದೇಶ್ವರಮಠದ ಕರಿವೃಷಭ ಶಿವಯೋಗಿಶ್ವರ ಸ್ವಾಮಿಗಳು ಅಧ್ಯಕ್ಷತೆ ವಹಿಸಲಿದ್ದಾರೆ. ಬಂಕಾಪೂರ ಅರಳೆಲೆಹಿರೇಮಠದ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು, ಎಮ್ಮಿಗನೂರ ಹಂಪಿಸಾವಿರ ದೇವರಮಠದ ಶ್ರೀ ವಾಮದೇವ ಮಹಾಂತ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸಲಿದ್ದಾರೆ. ಸಚಿವ ಡಾ. ಎಚ್.ಕೆ. ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕರುಗಳಾದ ಡಾ. ಚಂದ್ರು ಲಮಾಣಿ, ಎಂ.ಆರ್. ಪಾಟೀಲ, ಪ್ರೊ. ಎಸ್.ವಿ. ಸಂಕನೂರ, ಶ್ರೀನಿವಾಸ ಮಾನೆ, ಮಾಜಿ ಸಂಸದ ಮಂಜುನಾಥ ಕುನ್ನೂರ, ಮಾಜಿ ಶಾಸಕರುಗಳಾದ ಜಿ.ಎಸ್. ಗಡ್ಡದೇವರಮಠ, ಜಿ.ಎಂ. ಮಹಾಂತಶೆಟ್ಟರ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಕುಸುಮಾವತಿ ಶಿವಳ್ಳಿ, ಎಂ.ಎಸ್. ಅಕ್ಕಿ, ಎನ್.ಎ. ಚರಂತಿಮಠ, ರಜತ್ ಉಳ್ಳಾಗಡ್ಡಿ ಹಾಗೂ ಮುಖ್ಯಾಧಿಕಾರಿಗಳು, ಪುರಸಭೆ ಚುನಾಯಿತ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ.


Spread the love

LEAVE A REPLY

Please enter your comment!
Please enter your name here