ವಿಜಯಸಾಕ್ಷಿ ಸುದ್ದಿ, ಗದಗ : ರೋಣ ತಾಲೂಕು ಅಬ್ಬಿಗೇರಿ ಗ್ರಾಮದಲ್ಲಿ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಶರನ್ನವರಾತ್ರಿ, ದಸರಾ ಧರ್ಮ ಸಮ್ಮೇಳನ ಅ.3ರಿಂದ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 3ರಂದು ಸಂಜೆ 7 ಗಂಟೆಗೆ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಉದ್ಘಾಟನೆ ಜರುಗಲಿದೆ. ಸಾನ್ನಿಧ್ಯವನ್ನು ರಂಭಾಪುರಿ ಶ್ರೀಗಳು ವಹಿಸುವರು. ಕಾರ್ಯಕ್ರಮವನ್ನು ಕೇಂದ್ರ ಸಚಿವ ವಿ.ಸೋಮಣ್ಣ ಉದ್ಘಾಟಿಸುವರು. ಅತಿಥಿಗಳಾಗಿ ನಾಡಿನ ಹಲವು ಗಣ್ಯರು ಆಗಮಿಸಲಿದ್ದಾರೆ. ಒಟ್ಟು 9 ದಿನಗಳ ಕಾಲ ನಡೆಯುವ ದಸರಾ ದರ್ಬಾರ, ಧರ್ಮ ಸಮ್ಮೇಳನದಲ್ಲಿ ಉಪನ್ಯಾಸ, ಗೌರವ ರಕ್ಷೆ, ಗುರು ರಕ್ಷೆಯಂತಹ ಕಾರ್ಯಕ್ರಮಗಳು ಜರುಗಲಿವೆ. ಅ.4ರ ಸಂಜೆ 7ಕ್ಕೆ `ರಂಭಾಪುರಿ ಬೆಳಗು’ ಕೃತಿ ಬಿಡುಗಡೆ ಜರುಗಲಿದ್ದು, ಸಹಕಾರ ಸಚಿವ ಕೆ.ಎನ. ರಾಜಣ್ಣ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ.ಎಸ. ಮಲ್ಲಿಕಾರ್ಜುನ, ಚಿತ್ರನಟ ದೊಡ್ಡಣ್ಣ ಪಾಲ್ಗೊಳ್ಳುವರು.
ಅ. 5ರಂದು `ಸಾಹಿತ್ಯ ಸಿರಿ’ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಗೃಹ ಸಚಿವ ಡಾ. ಜಿ.ಪರಮೇಶ್ವರ, ಮಹಿಳಾ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಸಂಸದ ಬಿ.ವೈ. ರಾಘವೇಂದ್ರ ಆಗಮಿಸುವರು. ಅ. 6ರಂದು ಸಂಜೆ 7ಕ್ಕೆ ಜರುಗುವ ಕಾರ್ಯಕ್ರಮದಲ್ಲಿ ರಂಭಾಪುರಿ `ಯುವಸಿರಿ’ ಪ್ರದಾನ ನಡೆಯಲಿದ್ದು, ಸಂಸದ ಜಗದೀಶ ಶೆಟ್ಟರ, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಅನ್ವರಿ, ನರಗುಂದ ಶಾಸಕ ಸಿ.ಸಿ. ಪಾಟೀಲ, ಪದ್ಮಶ್ರೀ ವಿಜಯ ಸಂಕೇಶ್ವರ ಆಗಮಿಸುವರು.
ಅ. ೭ರರಂದು `ಬಾಲಕ-ಪಾಲಕ-ಶಿಕ್ಷಕ ನೀತಿ ಸಂಹಿತೆ’ ಕೃತಿ ಬಿಡುಗಡೆ ಜರುಗಲಿದೆ. ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಅರಣ್ಯ ಸಚಿವ ಈಶ್ವರ ಖಂಡ್ರೆ ಮುಂತಾದವರು ಆಗಮಿಸುವರು.ಸಾವಯವ ಕೃಷಿ ಮಹತ್ವ ಕುರಿತು ಉಪನ್ಯಾಸ, ಗೌರವ ಶ್ರೀರಕ್ಷೆ, ಗುರು ರಕ್ಷೆ ಜರುಗಲಿದೆ.
ಅ. 8ರಂದು ವೀರಶೈವ ಸಿರಿ, ಕಾವ್ಯ ಕುಸುಮ ಕೃತಿಗಳ ಬಿಡುಗಡೆಗೊಳ್ಳಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಜಿ.ಎಸï. ಪಾಟೀಲ, ನೇಮಿ ನಾಯಕ, ಸಂಗಣ್ಣ ಕರಡಿ, ಡಿ.ಆರï. ಪಾಟೀಲ, ಆನಂದಸ್ವಾಮಿ ಗಡ್ಡದೇವರಮಠ ಆಗಮಿಸುವರು.
ಅ. 9ರಂದು `ಶಿವಾಚಾರ್ಯ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸಂಸದ ಪಿ.ಸಿ. ಗದ್ದಿಗೌಡ್ರ, ಶಾಸಕ ಜಗದೀಶ ಗುಡಗುಂಟಿಮಠ, ಶರಣು ಸಲಗರ ಆಗಮಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ನರೇಗಲ್ಲದ ಮಲ್ಲಿಕಾರ್ಜುನ ಶಿವಾಚಾರ್ಯರು, ಚಂದ್ರು ಬಾಳಿಹಳ್ಳಿಮಠ, ವಿರೇಶ ಕೂಗು, ವಿ.ಬಿ. ಸೋಮನಕಟ್ಟಿಮಠ ಮುಂತಾದವರು ಹಾಜರಿದ್ದರು.
ಅ. 10ರಂದು ಸಾಧನ ಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಬಳ್ಳಾರಿ ಶಾಸಕ ಭರತರೆಡ್ಡಿ ಸೇರಿದಂತೆ ಅನೇಕರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. `ಹಾಸ್ಯದಲ್ಲಿ ನೈತಿಕ ಮೌಲ್ಯಗಳು’ ಕುರಿತು ಗಂಗಾವತಿ ಪ್ರಾಣೇಶï ಉಪನ್ಯಾಸ ನೀಡುವರು. ಅ. 11ರಂದು ಸಂಜೆ 7ಕ್ಕೆ ರುದ್ರಗಣಾಧಿಪ ವೀರಭದ್ರ ಹಾಗೂ ಶ್ರೀಪೀಠದ ವಾರ್ತಾ ಸಂಕಲನ ಬಿಡುಗಡೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿ.ಪ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು. ನಂತರ ಗೌರವ ಶ್ರೀರಕ್ಷೆ, ಉಪನ್ಯಾಸ, ಗುರು ರಕ್ಷೆ ಕಾರ್ಯಕ್ರಮಗಳಿವೆ. ಅ 12ರಂದು ಸಂಜೆ 4.30ಕ್ಕೆ ವಿಜಯ ದಶಮಿಯ ಶಮೀಸೀಮೋಲ್ಲಂಘನ, ಸಿಂಹಾಲನಾರೋಹಣ, ಶಾಂತಿ ಸಂದೇಶ ಕಾರ್ಯಕ್ರಮ ಜರುಗಲಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಮಾಹಿತಿ ನೀಡಿದರು.
ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಅಬ್ಬಿಗೇರಿ ಹಿರೇಮಠ ಮತ್ತು ಸಿದ್ದರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯರು ಮಾತನಾಡಿ, ಈ ಕಾರ್ಯಕ್ರಮವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆ ಪೂರಕ ಯೋಜನೆಗಳನ್ನು ರೂಪಿಸಲಾಗಿದೆ. ಕೃಷಿ ಮೇಳ, ಉಚಿತ ಆರೋಗ್ಯ ತಪಾಸಣೆ, ಮಕ್ಕಳ ಆರೋಗ್ಯ, ಕಣ್ಣಿನ ತಪಾಸಣೆಗಾಗಿ ಸುಸಜ್ಜಿತವಾದ ತಾತ್ಕಾಲಿಕ ಆಸ್ಪತ್ರೆ ಸ್ಥಾಪನೆ ಮಾಡಲಾಗಿದೆ. ಪ್ರತಿ ದಿನ ೨೫ ಸಾವಿರಕ್ಕಿಂತಲೂ ಅಧಿಕ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.