ಬೆಳಗಾವಿ:- ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ ಭಿನ್ನಮತ ಸ್ಫೋಟ ಹಿನ್ನೆಲೆ, ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ ಕೊಟ್ಟಿದ್ದಾರೆ.
ರಮೇಶ್ ಕತ್ತಿ ರಾಜೀನಾಮೆ ನೀಡಿದ ಕೆಲ ಹೊತ್ತಿನಲ್ಲೇ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಜಾರಕಿಹೊಳಿಗೆ 14 ಜನ ಡಿಸಿಸಿ ಬ್ಯಾಂಕ್ ನಿರ್ದೇಶಕರು ಸಾಥ್ ನೀಡಿದ್ದಾರೆ.
ಬಳಿಕ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಅವರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ ಕೊಟ್ಟಿದ್ದಾರೆ. ಡಿಸಿಸಿ ಬ್ಯಾಂಕ್‌ಗೆ 2020ರಲ್ಲಿ ಎಲ್ಲರನ್ನ ಅವಿರೋಧವಾಗಿ ಆಯ್ಕೆ ಮಾಡಿದ್ವಿ. 4 ವರ್ಷಗಳ ಕಾಲ ರಮೇಶ್ ಕತ್ತಿ ಅಧ್ಯಕ್ಷರಾಗಿದ್ದಾರೆ. ಕಳೆದ 1 ವರ್ಷದಿಂದ ಸಾಕಷ್ಟು ಭಿನ್ನಾಭಿಪ್ರಾಯ ಇತ್ತು. ಒಂದು ವರ್ಷ ಉಳಿದಿದ್ದು ಹೀಗಾಗಿ ರಮೇಶ್ ಕತ್ತಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಹೇಳಿದ್ವಿ. ಹೀಗಾಗಿ ರಮೇಶ್ ಕತ್ತಿ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಈ ತಿಂಗಳ ಒಳಗಾಗಿ ಹೊಸ ಅಧ್ಯಕ್ಷರ ಆಯ್ಕೆ ಮಾಡಬೇಕು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಪ್ರಭಾಕರ್ ಕೋರೆ, ರಮೇಶ್ ಕತ್ತಿ ಎಲ್ಲರೂ ಸೇರಿ ಅಧ್ಯಕ್ಷ ಆಯ್ಕೆ ಮಾಡ್ತಾರೆ. ಯಾರ ಒತ್ತಾಯ ಮಾಡದೇ, ಹೆದರಿ ರಾಜೀನಾಮೆ ಕೊಟ್ಟಿಲ್ಲ. ಅಕ್ಟೋಬರ್ 8ರ ಒಳಗಾಗಿ ಹೊಸ ಅಧ್ಯಕ್ಷರ ಆಯ್ಕೆ ಮಾಡ್ತೀವಿ. 17 ಜನ ಸದಸ್ಯರು ಒಂದಾಗಿ ಒಗ್ಗಟ್ಟಾಗಿ ಕೆಲಸ ಮಾಡ್ತಿದ್ದೇವೆ. ರಮೇಶ್ ಕತ್ತಿಯವರೂ ಹೊಸ ಅಧ್ಯಕ್ಷ ಆಯ್ಕೆಗೆ ಬರ್ತಾರೆ ಎಂದು ತಿಳಿಸಿದ್ದಾರೆ.