ಬೆಂಗಳೂರು: ನಡುರಸ್ತೆಯಲ್ಲೇ ಲಾಂಗ್ ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಇಬ್ಬರು ಯುವಕರನ್ನು ತಿಲಕ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನದೀಂ ಹಾಗೂ ಜುನೈದ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಜಯನಗರದ 9ನೇ ಬ್ಲಾಕ್‌ನಲ್ಲಿ ಇಬ್ಬರು ಲಾಂಗ್ ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಓಡಾಡಿದ್ದರು ಎನ್ನಲಾಗಿದೆ.
ಈ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ತಿಲಕ್ ನಗರ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಇಬ್ಬರನ್ನೂ ಬಂಧಿಸಿ, ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಸ್ಥಳೀಯರು ಹಾಗೂ ವ್ಯಾಪಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.



