ವಿಜಯಸಾಕ್ಷಿ ಸುದ್ದಿ, ಗದಗ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀಮತಿ ಯಶೋಧಾ.ಪಿ ಅವರ ಆದೇಶದ ಮೇರೆಗೆ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಬಸವರಾಜ್ ಸಂಗಪ್ಪ ಬೇವಿನಮರದ, ಸಮಿತಿಯ ಜಿಲ್ಲಾ ಅಧ್ಯಕ್ಷರನ್ನಾಗಿ ರಾಮು ವಾಲ್ಮೀಕಿ ಅವರನ್ನು ನೇಮಕ ಮಾಡಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ರಾಮು ವಾಲ್ಮೀಕಿ ಅವರಿಗೆ ಗೆಳೆಯರ ಬಳಗ ಅಭಿನಂದಿಸಿದೆ.



