ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ ಎಂದು ಮೋಹಕತಾರೆ ನಟಿ ರಮ್ಯಾ ಹೇಳಿದ್ದಾರೆ.
ಸ್ಟಾರ್ ನಟರು ಸಿನಿಮಾ ಮಾಡದೇ ಇದ್ದರೆ ಸಿನಿಮಾ ರಂಗಕ್ಕೆ ನಷ್ಟಕ್ಕೆ ತಿರುಗುತ್ತಾ? ಎಂದು ಕೇಳಲಾದ ಪ್ರಶ್ನೆಗೆ ರಮ್ಯಾ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ. ದುಬಾರಿ ಬಜೆಟ್, ಸ್ಟಾರ್ ನಟರು ಇಲ್ಲದೇ ಸಿನಿಮಾ ಗೆಲ್ಲಿಸಬಹುದು ಎನ್ನುವುದಕ್ಕೆ ಸು ಫ್ರಂ ಸೋ ಸಿನಿಮಾ ಸಾಕ್ಷಿ. ಸು ಫ್ರಂ ಸೋನಲ್ಲಿ ಯಾವ ಸ್ಟಾರ್ ನಟರು ಇದ್ದಾರೆ?.. ಕಂಟೆಂಟ್ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎಂದು ರಮ್ಯಾ ಹೇಳಿದ್ದಾರೆ.
ಇನ್ನೂ ಇದೇ ವೇಳೆ ದರ್ಶನ್ ಬಗ್ಗೆ ಮಾತನಾಡಿ, ದರ್ಶನ್ ಲೈಟ್ಬಾಯ್ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದ್ರೆ ಜೀವನ ಹಾಳುಮಾಡಿಕೊಂಡ್ರು ಅಂತ ನಟಿ ರಮ್ಯಾ ಕೊಲೆ ಆರೋಪಿ ದಚ್ಚು ಬಗ್ಗೆ ಸಾಫ್ಟ್ ಕಾರ್ನರ್ ತೋರಿದ್ದಾರೆ.



