ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದಲ್ಲಿ ಮಾ.29ರ ಶುಕ್ರವಾರ ರಂಗಪಂಚಮಿ ಆಚರಿಸಲು ನಿರ್ಣಯಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ತಿಳಿಸಿದ್ದಾರೆ.
Advertisement
ಬಿಸಿಲಿನ ಪ್ರಮಾಣ ಹೆಚ್ಚಿರುವುದರಿಂದ ಬೆಳಿಗ್ಗೆ 8ರಿಂದ ಮಧ್ಯಾಹ್ನ 12 ಗಂಟೆಯೊಳಗೆ ಹಬ್ಬದ ಆಚರಣೆ ಪೂರ್ಣಗೊಳಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ಅಲ್ಲದೆ, ತುಂಗಭದ್ರಾ ನದಿಯಲ್ಲಿ ನೀರು ಖಾಲಿಯಾಗಿದ್ದರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಬೋರ್‌ವೆಲ್‌ಗಳ ನೀರಿನ ಪ್ರಮಾಣದಲ್ಲೂ ಕೊರತೆ ಕಂಡು ಬರುತ್ತಿದೆ. ಸಾರ್ವಜನಿಕರು ನೀರನ್ನು ಹಿತ-ಮಿತವಾಗಿ ಬಳಸಲು ಮತ್ತು ಸಹಕರಿಸಲು ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.