ಲಲಿತಾ ಕೆರಿಮನಿಯವರಿಗೆ ರಾಣಿ ಚನ್ನಮ್ಮ ಪ್ರಶಸ್ತಿ

0
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಜರುಗಿದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಇಲ್ಲಿನ ಹಿರಿಯ ಸಾಹಿತಿ ಲಲಿತಾ ಸಿ.ಕೆರಿಮನಿ ಅವರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ-2025 ಪ್ರದಾನ ಮಾಡಲಾಯಿತು.

Advertisement

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ, ಸ್ತ್ರಿ ಶಕ್ತಿ ಗುಂಪು ಹಾಗೂ ಒಕ್ಕೂಟಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಲಲಿತಾ ಕೆರಿಮನಿ ಅವರು ಮೂರು ದಶಕಗಳಿಗೂ ಅಧಿಕ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಸಮಾಜ ಸೇವೆ, ಶಿಕ್ಷಣ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಸಾಧನೆ ಮಾಡಿದ್ದು, ಸಮಾಜ ಸೇವೆಯಲ್ಲಿಯೂ ವಿಶಿಷ್ಟ ಕಾರ್ಯ ಮಾಡುತ್ತಿದ್ದಾರೆ. ಹಲವಾರು ಸಂಘ-ಸAಸ್ಥೆಗಳಿಗೆ ಮಾರ್ಗದರ್ಶಕರಾಗಿ, ಮಹಿಳಾ ಸಂಘಗಳಿಗೆ ಮುಂಚೂಣಿಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಮಕ್ಕಳು ಸಹ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಶಾಸಕ ಡಾ. ಉದಯ ಗರುಡಾಚಾರ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಾವತಿ, ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ, ಇಲಾಖೆಯ ಕಾರ್ಯದರ್ಶಿ ಡಾ. ಶಮ್ಲ ಇಕ್ಬಾಲ್, ನಿರ್ದೇಶಕರಾದ ರಾಘವೇಂದ್ರ. ಟಿ, ವ್ಯವಸ್ಥಾಪಕ ನಿರ್ದೇಶಕಿ ಪುಷ್ಪಲತಾ ಮತ್ತಿತರರು ಉಪಸ್ಥಿತರಿದ್ದರು.

ಹಿರಿಯ ಸಾಹಿತಿ ಲಲಿತಾ ಕೆರಿಮನಿಯವರು ರಾಜ್ಯಮಟ್ಟದ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿಗೆ ಪುರಸ್ಕೃತರಾದ ಹಿನ್ನೆಲೆಯಲ್ಲಿ ಪಟ್ಟಣದ ಅನೇಕ ಮುಖಂಡರು, ಶಾಸಕರು, ಮಾಜಿ ಶಾಸಕರು, ಹಿರಿ-ಕಿರಿಯ ಸಾಹಿತಿಗಳು, ಅಭಿಮಾನಿಗಳು, ಅವರ ಶಿಷ್ಯರು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here