ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ವಿಜಯ ಪದವಿಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ರಂಜಿತಾ ಡಾವಣಗೇರೆ ತಾಲೂಕು ಮಟ್ಟದ ವೈಯಕ್ತಿಕ ಆಟದಲ್ಲಿ ಅಮೋಘ ಸಾಧನೆ ಮಾಡಿದ್ದಾಳೆ.
Advertisement
400 ಮೀಟರ್ ಆಡೆತಡೆ ಓಟದಲ್ಲಿ ಪ್ರಥಮ ಸ್ಥಾನ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿ ಮಹಾವಿದ್ಯಾಲಯಕ್ಕೆ ಕೀರ್ತೀ ತಂದಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಶೋಕ ಟಿ.ಅಕ್ಕಿ, ಕಾರ್ಯದರ್ಶಿ ಸಂತೋಷ ಅಕ್ಕಿ, ಪ್ರಭಾರ ಪ್ರಾಚಾರ್ಯರಾದ ಶಿಲ್ಪಾ ಮಲ್ಲಾಪೂರ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.