ವಿಜಯಸಾಕ್ಷಿ ಸುದ್ದಿ, ಗದಗ: ನಗರದ ವಿಜಯ ಲಲಿತ ಕಲಾ ಸಂಸ್ಥೆಯ ವಿಜಯ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ರಂಜಿತಾ ಡಾವಣಗೇರೆ ಜಿಲ್ಲಾ ಮಟ್ಟದ ವೈಯಕ್ತಿಕ ಆಟವಾದ 400 ಮೀಟರ್ ಅಡೆತಡೆ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾಳೆ.
ಈ ವಿದ್ಯಾರ್ಥಿನಿಯ ಸಾಧನೆಯನ್ನು ಅಭಿನಂದಿಸಿ, ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ಸು ಗಳಿಸಲೆಂದು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಅಶೋಕ ಟಿ. ಅಕ್ಕಿ, ಕಾರ್ಯದರ್ಶಿ ಸಂತೋಷ ಅಕ್ಕಿ, ಪ್ರ. ಪ್ರಾಚಾರ್ಯರಾದ ಶಿಲ್ಪಾ ಮಲ್ಲಾಪೂರ ಹಾಗೂ ಸಿಬ್ಬಂದಿ ವರ್ಗದವರು ಹಾರೈಸಿದ್ದಾರೆ.



