ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

0
Spread the love

ಬೆಂಗಳೂರು: ರನ್ಯಾ ರಾವ್ ಬಂಧಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ದಶದಿಕ್ಕಿನಲ್ಲೂ ಗೋಲ್ಡ್ ಸ್ಮಗ್ಲಿಂಗ್ ಜಾಲದ ಇಂಚಿಂಚೂ ಮಾಹಿತಿಯನ್ನು ಜಾಲಾಡುತ್ತಿದ್ದಾರೆ. ದಿನಗಳು ಕಳೆದಂತೆ ಗೋಲ್ಡನ್ ಗರ್ಲ್‌ ರನ್ಯಾ ರಾವ್‌ ಪ್ರಕರಣದ ಸ್ಫೋಟಕ ಮಾಹಿತಿಗಳು ಬಯಲಾಗುತ್ತಿದೆ.

Advertisement

ಇದೀಗ ಮಗಳಿಂದ ತಂದೆಗೂ ಸಂಕಷ್ಟ ಶುರುವಾಗಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮಚಂದ್ರರಾವ್‌ಗೆ ಕೊಟ್ಟಿದ್ದ ಪ್ರೋಟೋಕಾಲ್‌ಗಳನ್ನು ದುರುಪಯೋಗ ಪಡಿಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿಕೊಂಡು ಅಕ್ರಮ ಅಪರಾಧ ಎಸಗಿರುವ ಆರೋಪ ಇದೆ.

ಸದ್ಯ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮದ‌ ವ್ಯವಸ್ಥಾಪಕ ನಿರ್ದೇಶಕರಾಗಿರುವ ರಾಮಚಂದ್ರರಾವ್ ಅವರನ್ನು ತನಿಖೆ ನಡೆಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸಿದೆ. ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ನೆರವನ್ನು ನೀಡಲು ಡಿಜಿಐಜಿಪಿ ಅಲೋಕ್ ಮೋಹನ್‌ಗೆ ಸೂಚನೆ ನೀಡಲಾಗಿದ್ದು, ತನಿಖೆ ನಡೆಸಿ ಒಂದು ವಾರದಲ್ಲಿ ವರದಿಯನ್ನು‌ ಸರ್ಕಾರಕ್ಕೆ ಸಲ್ಲಿಸಲು ಖಡಕ್ ಸೂಚನೆ ನೀಡಲಾಗಿದೆ. ಇದಲ್ಲದೇ‌, ಪೊಲೀಸ್ ಸಿಬ್ಬಂದಿ ಪ್ರೋಟೋಕಾಲ್ ಉಲ್ಲಂಘನೆಯಲ್ಲಿ ಭಾಗಿಯಾಗಿರುವ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಸಹ ಸರ್ಕಾರ ಆದೇಶ ನೀಡಿದೆ.


Spread the love

LEAVE A REPLY

Please enter your comment!
Please enter your name here