ಕಲಬುರ್ಗಿ:- ಭಿಕ್ಷೆ ಬೇಡುತ್ತಿದ್ದ ಯುವಕನಿಂದ 75 ವರ್ಷದ ಮುದುಕಿ ಮೇಲೆ ರೇಪ್ ನಡೆದಿರುವ ಘಟನೆ ಜಿಲ್ಲೆ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ಗ್ರಾಮದಲ್ಲಿ ಜರುಗಿದೆ.
ಫಕೀರ ತಯ್ಯಬ್ ಎಂಬ ಯುವಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ತಯ್ಯಬ್ ಭಿಕ್ಷಾಟನೆ ಮಾಡುತ್ತಾ ಊರೂರು ಸುತ್ತುತ್ತಿದ್ದ. ಸದ್ಯ ಪರಾರಿಯಾಗಿರುವ ತಯ್ಯಬ್‌ನನ್ನು ಪತ್ತೆಹಚ್ಚುವ ಸಲುವಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಲ್ಲದೇ ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



