BJP MLA ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು!

0
Spread the love

ಬೆಂಗಳೂರು:- BJP MLA ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

Advertisement

ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ.

ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್‌ ದಾಖಲಾಗಿದೆ. ಮುನಿರತ್ನ ನಾಯ್ಡು (ಎ1), ವಿಜಯ್‌ ಕುಮಾರ್‌ (ಎ2), ಸುಧಾಕರ (ಎ3), ಕಿರಣ್‌ ಕುಮಾರ್‌ (ಎ4), ಲೋಹಿತ್‌ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಕಗ್ಗಲೀಪುರದ ಖಾಸಗಿ ರೆಸಾರ್ಟ್‌ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಪೊಲೀಸರು ಈ ಸಂಬಂಧ ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here