ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ!

0
Spread the love

ಬೆಂಗಳೂರು:- ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಸಿದೆ.

Advertisement

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಅಪ್ಪ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.

ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ. ಹಣ್ಣು ಕೊಡುವ ನೆಪದಲ್ಲಿ ಸೊಂಟ ಚಿವುಟಿ, ಸೀರೆ ಎಳೆದು ಪ್ರಜ್ವಲ್ ದೌರ್ಜನ್ಯವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಮಗ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಹೊಳೆನರಸೀಪುರ ಮನೆಯಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರೋದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಹೊಳೆನರಸೀಪುರ ಮನೆಯಿಂದ ಬೆಂಗಳೂರು ಮನೆಗೆ ಕರೆದುಕೊಂಡು ಬಂದು ಕೂಡ ಅತ್ಯಾಚಾರ ಎಸಗಿದ್ದಾರೆ. ಹೊತ್ತಿಲ್ಲದ ಹೊತ್ತಿನಲ್ಲಿ ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ ಎಂದು ತನಿಖೆ ನಡೆಸಿದ ಎಸ್‌ಐಟಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ.


Spread the love

LEAVE A REPLY

Please enter your comment!
Please enter your name here