ಬೆಂಗಳೂರು:- ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣದಿಂದ ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ಇನ್ನು ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 9ಕ್ಕೆ ಮುಂದೂಡಿದೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಈ ನಾಲ್ಕು ಪ್ರಕರಣದ ಜಾಮೀನು ಅರ್ಜಿಗಳು ಸಹ ವಜಾಗೊಂಡಿವೆ.
ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ ನಲ್ಲಿ 2,144 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ ನಲ್ಲಿ ಕಸರತ್ತು ನಡೆಸಿದ್ದರು.
ಆದರೆ ಜಾಮೀನು ಕೊಡಲು ಕೋರ್ಟ್ ನಿರಾಕರಿಸಿದೆ. ಇದೇ ವೇಳೆ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದರು, ಆರೋಪ ಓದಿ ಹೇಳುವಾಗ ನ್ಯಾಯಾಧೀಶರ ಮುಂದೆಯೇ ಕೈ ಮುಗಿದು ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದರು.