ಬೆಂಗಳೂರು:- ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ಎದುರಾಗಿದ್ದು, ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
Advertisement
ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ವಜಾಗೊಳಿಸಿದ್ದಾರೆ.
ಈ ಹಿಂದೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು ಎನ್ನಲಾಗಿದೆ.