Rape Case: 15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್! ದೂರು ದಾಖಲು!

0
Spread the love

ಬೆಳಗಾವಿ:- ಹದಿನೈದು ವರ್ಷದ ಬಾಲಕಿ ಮೇಲೆ 6 ಜನರ ಗ್ಯಾಂಗ್​ನಿಂದ ಎರಡೆರೆಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವಂತಹ ಘಟನೆ ನಗರದ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ.

Advertisement

ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್​ ದಾಖಲಾದ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಎ1 ಸೇರಿ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು ಪುಸಲಾಯಿಸಿ ಗುಡ್ಡಕ್ಕೆ ಕರೆದೊಯ್ದು 6 ದುರುಳರಿಂದ ಅತ್ಯಾಚಾರವೆಸಗಲಾಗಿದೆ. ಕೃತ್ಯವೆಸಗುವಾಗ ದುಷ್ಕರ್ಮಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಅದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಕೂಡ ವಿಡಿಯೋ ಮಾಡಿಕೊಂಡಿದ್ದಾರೆ. ಅದೇ ವಿಡಿಯೋಗಳನ್ನು ಇಟ್ಟುಕೊಂಡು ಇದೀಗ ಮತ್ತೆ ಬಾಲಕಿಗೆ ಬೆದರಿಕೆ ಹಿನ್ನೆಲೆ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದೂರಿನ ಹಿನ್ನೆಲೆ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here