ಬೆಂಗಳೂರು: ಅತ್ಯಾಚಾರ, ಕೊಲೆ ಬೆದರಿಕೆ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ಎಂಎಲ್‌ಎ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಸಹ ಮುನಿರತ್ನಗೆ ಜಾಮೀನು ದೊರೆತಿದೆ.
Advertisement
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುನಿರತ್ನಗೆ ಜಾಮೀನು ಮಂಜೂರು ಮಾಡಿದೆ. ಸೋಮವಾರ ಇದೇ ನ್ಯಾಯಾಲಯ ಅತ್ಯಾಚಾರ ಪ್ರಕರಣದ ಇತರ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಲೋಹಿತ್, ಕಿರಣ್ ಮತ್ತು ಮಂಜುನಾಥ್‌ಗೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಜಾಮೀನು ಮಂಜೂರು ಮಾಡಿದ್ದರು.ಬಿಜೆಪಿಯಲ್ಲಿ ಸಕ್ರಿಯರಾಗಿದ್ದ ರಾಜರಾಜೇಶ್ವರಿ ನಗರದ ಸಾಮಾಜಿಕ ಕಾರ್ಯಕರ್ತೆ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿತ್ತು.. ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.