ನವದೆಹಲಿ:- ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಕೇಸ್ ಗೆ ಸಂಬಂಧಪಟ್ಟಂತೆ ಜಾಮೀನು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿದೆ.
Advertisement
ಪ್ರಜ್ವಲ್ ಅವರು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಸೋಮವಾರ ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು.
ಪ್ರಜ್ವಲ್ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಕಳೆದ ಏಪ್ರಿಲ್ 28ರಂದು ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದರು.
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದೂರು ದಾಖಲಾಗಿತ್ತು. ಎಫ್‌ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಎ1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ.