ಬೆಂಗಳೂರು: ಸ್ಯಾಂಡಲ್ ವುಡ್ ನಟ ಮಡೆನೂರು ಮನು ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಕಾಮಿಡಿ ಕಿಲಾಡಿ ಶೋ ಮೂಲಕ ಮಿಂಚಿದ್ದ ಮಡೆನೂರು ಮನು ವಿರುದ್ಧ ಕಿರುತೆರೆ ನಟಿಯಿಂದ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
Advertisement
ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್ ದಾಖಲಾಗಿದೆ. ಕಾಮಿಡಿ ಕಿಲಾಡಿಯ ಸಹ ಕಲಾವಿದೆಯಿಂದಲೇ ಅತ್ಯಾಚಾರ ಕೇಸ್ ದಾಖಲಾಗಿದೆ.
ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.