ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಘಟನೆ ನಡೆದ 2 ವರ್ಷದ ಬಳಿಕ ಆರೋಪಿ ಅರೆಸ್ಟ್!

0
Spread the love

ಬೆಳಗಾವಿ:- ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2 ವರ್ಷದ ಬಳಿಕ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

Advertisement

ತುಫೇಲ್ ಅಹ್ಮದ್ ದಾದಾಫೀರ್ ಬಂಧಿತ ಆರೋಪಿ. ಈ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕ ನೀಡಿದ ದೂರಿನ ಅನ್ವಯ ಮಂಗಳವಾರ ರಾತ್ರಿ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್‌ನನ್ನು ಬಂಧಿಸಿದ್ದೇವೆ ಎಂದರು.

ಮಂಗಳವಾರ ಸಂಜೆ ಪುನೀತ್ ಕೆರೆಹಳ್ಳಿ ಒಂದು ವಿಡಿಯೋ ಪೋಸ್ಟ್ ಮಾಡಿದ್ದರು. ಅದರಲ್ಲಿ ಓರ್ವ ವ್ಯಕ್ತಿ ಮಾತಾಡಿದ ಆಡಿಯೋ ಮತ್ತು ವಿಡಿಯೋ ತುಣುಕು ಇತ್ತು. ಇದರಲ್ಲಿ ಬಾಲಕಿ ಮೇಲೆ ಓರ್ವ ವ್ಯಕ್ತಿ ಮಲಗುವ ರೀತಿಯಲ್ಲಿತ್ತು. ಈ ವಿಡಿಯೋ ಪ್ರಕಟವಾದ ನಂತರ ನಮ್ಮ ಸೈಬರ್‌ ಕ್ರೈಂ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ವಿಡಿಯೋದಲ್ಲಿನ ವಿಳಾಸ ಆಧರಿಸಿ ನಮ್ಮ ಪೊಲೀಸರು ತನಿಖೆ ಶುರು ಮಾಡಿದ್ದರು. ಕೂಡಲೇ ನಮ್ಮ ಮುರಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.

ಈ ಘಟನೆ 2023 ಅಕ್ಟೋಬರ್ 5 ರಂದು ನಡೆದಿದ್ದು ಮಸೀದಿ ಪಕ್ಕದ ಮನೆಯ ವ್ಯಕ್ತಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆರೋಪಿ ಘಟನೆ ನಡೆದ ಹಿಂದಿನ ದಿನ ಬಾಗಲಕೋಟೆಯ ಮಹಾಲಿಂಗಪುರದಿಂದ ಬಂದಿದ್ದ. ಚಿಕ್ಕಮ್ಮನ ಮನೆಗೆ ಬಂದಾಗ ಹೀನಾಯ ಕೃತ್ಯ ಎಸಗಿದ್ದ. ಈ ವಿಚಾರ ಗೊತ್ತಾದಾಗ ಅಲ್ಲಿರುವ ಸ್ಥಳೀಯರು ಬಾಲಕಿ ತಂದೆ ಕರೆದು ಮಾತಾಡಿದ್ದರು. ಆ ದಿನ ದೂರು ಕೊಡುವುದು ಬೇಡಾ ಅಂತಾ ತೀರ್ಮಾನಿಸಿ ಬಿಟ್ಟಿದ್ದರು. ಇದಾದ ಬಳಿಕ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಾಲಕಿ ಪೋಷಕರ ಜೊತೆಗೆ ಮಾತಾಡಲಾಗಿತ್ತು.

ತಂದೆ ತಾಯಿ ದೂರು ನೀಡಲು ಒಪ್ಪದ ಕಾರಣ ಜಿಲ್ಲಾ‌‌ ಮಕ್ಕಳ ರಕ್ಷಣಾ ಘಟಕದಿಂದ ದೂರು ಪಡೆದು ರಾತ್ರಿಯೇ ಆರೋಪಿ ತುಫೇಲ್ ಅಹ್ಮದ್ ದಾದಾಫೀರ್ ಬಂಧಿಸಿದ್ದೇವೆ ಎಂದರು.


Spread the love

LEAVE A REPLY

Please enter your comment!
Please enter your name here