ದಾವಣಗೆರೆ:- ಬಾಲಕಿ ಮೇಲೆ ಅತ್ಯಾಚಾರ ಮಾಡಲು ಸಹಕಾರ ಕೊಟ್ಟ ಆರೋಪಿಯ ಸ್ನೇಹಿತನಿಗೂ ಶಿಕ್ಷೆ ವಿಧಿಸಿ ದಾವಣಗೆರೆ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಪ್ರಾಪ್ತ ಬಾಲಕಿ ಅಪರಹಣ ಹಾಗೂ ಅತ್ಯಾಚಾರಕ್ಕೆ ಸಹಕರಿಸಿದ ಪ್ರಮುಖ ಆರೋಪಿಯ ಸ್ನೇಹಿತನಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 60 ಸಾವಿರ ರೂ. ದಂಡವನ್ನು ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಮುಖ ಆರೋಪಿಯಿಂದ ಬಾಲಕಿಯನ್ನು ಅಪಹರಣ ಮಾಡಲಾಗಿದೆ. ಬಳಿಕ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ಮಾಡಲಾಗಿದೆ. ಈ ಅತ್ಯಾಚಾರ ನಡೆಸಲು ಸ್ನೇಹಿತನಿಗೆ ಸಹಕಾರ ನೀಡಿದ ಆರೋಪಿಗೆ ಇದೀಗ ಶಿಕ್ಷೆ ವಿಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಹೊನ್ನಾಳಿ ಇನ್ಸ್ಪೆಕ್ಟರ್ ಟಿವಿ ದೇವರಾಜ್ ನ್ಯಾಯಾಲಯಕ್ಕೆ ಆರೋಪನ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಮನಾರಾಯಣ ಹೆಗಡೆ, ಸಂತ್ರಸ್ತ ಬಾಲಕಿಗೆ ನಾಲ್ಕು ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದೆ.



