HomeIndia Newsಖಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಮುದುಕಿ ಮೇಲೆ ರೇಪ್: ಆರೋಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ!

ಖಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಮುದುಕಿ ಮೇಲೆ ರೇಪ್: ಆರೋಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ!

For Dai;y Updates Join Our whatsapp Group

Spread the love

ನವದೆಹಲಿ:- ಖಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಮುದುಕಿ ಮೇಲೆ ರೇಪ್ ಮಾಡಿದ್ದ ಆರೋಪಿಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ನೀಡಲಾಗಿದೆ.

ದೆಹಲಿಯ ತೀಸ್‌ ಹಜಾರಿ ಕೋರ್ಟ್‌ ಈ ಮಹತ್ವ ತೀರ್ಪು ಹೊರಹಾಕಿದೆ. 2022ರಲ್ಲಿ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತೀವ್ರ ಖಾಯಿಲೆಗೆ ತುತ್ತಾಗಿ ಹಾಸಿಗೆ ಹಿಡಿದಿದ್ದ ವೃದ್ಧೆಯ ಕೈಕಾಲು ಕಟ್ಟಿ ಹಾಕಿ 30ವರ್ಷದ ಅಂಕಿತ್‌ ಎಂಬಾತ ಅತ್ಯಾಚಾರ ಎಸಗಿದ್ದ. ಬಿಟ್ಟುಬಿಡುವಂತೆ ಎಷ್ಟೇ ಗೋಗರೆದರೂ ಕೇಳದ ಅಂಕಿತ್‌ ಮೃಗದಂತೆ ಆಕೆ ಮೈಮೇಲೆ ಎರಗಿದ್ದ. ಬಳಿಕ ವೃದ್ಧೆ ನೀಡಿದ ದೂರಿನ ಮೇರೆಗೆ ಅಂಕಿತ್‌ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಪರಾಧಿಯು ವೃದ್ಧೆಯ ಮನೆಗೆ ಪ್ರವೇಶಿಸಿದಾಗ ಆಕೆ ಅನಾರೋಗ್ಯದಿಂದ ಹಾಸಿಗೆ ಮೇಲೆ ಮಲಗಿದ್ದಳು. ಆತ ವೃದ್ಧೆಯನ್ನು ಥಳಿಸಿ, ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯ ಮೊಬೈಲ್ ಕದ್ದು ಪರಾರಿಯಾಗಿದ್ದಾನೆ.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆಂಚಲ್ ಅವರು ವೃದ್ಧೆಯ ಸಾಕ್ಷ್ಯವನ್ನು ಗಮನಿಸಿದ್ದು, ಅಂಕಿತ್‌ಗೆ 12 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ. ಈ ಘಟನೆಯ ನಂತರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆಯ ಮುಖ, ಕೈ ಮತ್ತು ಎದೆಯ ಮೇಲೆ ಗಾಯಗಳಾಗಿರುವುದು ಕಂಡುಬಂದವು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ. ಇನ್ನು ಅಂಕಿತ್ ಅಲಿಯಾಸ್ ಮೊಗ್ಲಿ ಅತ್ಯಾಚಾರ, ಮನೆ ಅತಿಕ್ರಮಣ, ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದ ಎನ್ನಲಾಗಿದೆ

ಕೆಲವು ದಿನಗಳ ಹಿಂದೆಯೂ ಇಂತಹದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿತ್ತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!