‘ಸಿಕಂದರ್’ ಸೋಲಿನ ಬೆನ್ನಲ್ಲೇ ಮತ್ತೊಂದು ಬಾಲಿವುಡ್ ಸಿನಿಮಾದಲ್ಲಿ ಬ್ಯುಸಿಯಾದ ರಶ್ಮಿಕಾ ಮಂದಣ್ಣ

0
Spread the love

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ನಟನೆಯ ಸಿಕಂದರ್‌ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಮಕಾಡೆ ಮಲಗಿದೆ. ಈ ಬೆನ್ನಲ್ಲೇ ನಟಿ ಇದೀಗ ಬಾಲಿವುಡ್‌ ನ ಮತ್ತೊಂದು ಸಿನಿಮಾದಲ್ಲಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸಿಕಂದರ್‌ ಸಿನಿಮಾದ ಬಳಿಕ ರಶ್ಮಿಕಾ ಥಾಮಾ ಸಿನಿಮಾದ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.

Advertisement

ರಶ್ಮಿಕಾ ಮಂದಣ್ಣ ನಟನೆಯ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲಿ ಬ್ಯಾಕ್‌ ಟು ಬ್ಯಾಕ್‌ ಸೂಪರ್‌ ಹಿಟ್‌ ಆಗಿದ್ದವು. ಆದರೆ ಸಲ್ಮಾನ್‌ ಖಾನ್‌ ಜೊತೆ ನಟಿಸಿದ್ದ ಸಿಕಂದರ್‌ ಸಿನಿಮಾ ನಿರೀಕ್ಷೆಯಂತೆ ಅಭಿಮಾನಿಗಳ ಮನಸ್ಸು ಮುಟ್ಟುವಲ್ಲಿ ಯಶಸ್ವಿಯಾಗಿಲ್ಲ. ‘ಸಿಕಂದರ್’ ಚಿತ್ರ ಹೀನಾಯವಾಗಿ ಸೋತಿದ್ರೂ ಕೂಡ ರಶ್ಮಿಕಾ ಮಂದಣ್ಣಗೆ ಇರುವ ಬೇಡಿಕೆ ಕಮ್ಮಿಯಾಗಿಲ್ಲ. ಸದ್ಯ ರಶ್ಮಿಕಾ ‘ಥಾಮಾ’ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದು ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.

ಡೈರೆಕ್ಟರ್ ಅದಿತ್ಯ ನಿರ್ದೇಶನದ ಸಿನಿಮಾದಲ್ಲಿ ಆಯುಷ್ಮಾನ್ ಖುರಾನಾಗೆ ರಶ್ಮಿಕಾ ನಾಯಕಿಯಾಗಿದ್ದಾರೆ. ಅವರೊಂದಿಗೆ ಪರೇಶ್ ರಾವಲ್ ಮತ್ತು ನವಾಜುದ್ದೀನ್ ಸಿದ್ದಿಕಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ವರ್ಷ ಅಕ್ಟೋಬರ್ 19ರಂದು ಸಿನಿಮಾ ರಿಲೀಸ್ ಆಗಲಿದೆ.


Spread the love

LEAVE A REPLY

Please enter your comment!
Please enter your name here