ವಿಜಯಸಾಕ್ಷಿ ಸುದ್ದಿ, ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬುಧವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ರಾಷ್ಟçಕವಿ ಕುವೆಂಪು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಪುಷ್ಪಾರ್ಚನೆ ಸಲ್ಲಿಸಿದರು.
Advertisement
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಹಿರಿಯ ಸಾಹಿತಿ ಬಾಳಣ್ಣ ಶೀಗಿಹಳ್ಳಿ, ಜನಜಾಗೃತಿ ಸಮಿತಿ ಅಧ್ಯಕ್ಷ ವಸಂತ ಅರ್ಕಾಚಾರ, ವೀರಣ್ಣ ಪತ್ತಾರ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು, ಆರತಿ ದೇವಶಿಕಾಮಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.