HomeGadag Newsಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್

ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ಉಚ್ಛ ನ್ಯಾಯಾಲಯ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ 2024ರ ಜುಲೈ 13ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನದ ಮೂಲಕ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಬಸವರಾಜ ತಿಳಿಸಿದ್ದಾರೆ.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಸಿವಿಲ್ ದಾವೆಗಳು, ಭೂ ಸ್ವಾಧೀನ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಎಮ್‌ಎಮ್‌ಆರ್‌ಡಿ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ಗುರುತಿಸಲಾಗಿದೆ.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನವೊಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು. ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ 13ರಂದು ಜರಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಗುರುಪ್ರಸಾದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!