ವಿಜಯಸಾಕ್ಷಿ ಸುದ್ದಿ, ಗದಗ : ಗದಗ-ಬೆಟಗೇರಿ ಅವಳಿ ನಗರಕ್ಕೆ ಕನ್ನಡ ನೆಲ-ಜಲ, ನಾಡು-ನುಡಿ ಜಾಗೃತಿ ಮೂಡಿಸಿದ ಕನ್ನಡ ಜ್ಯೋತಿ ರಥ ಯಾತ್ರೆಯು ಕವಿ ಮನಸ್ಸುಗಳಿಗೆ ಹಾಗೂ ಕನ್ನಡ ಅಭಿಮಾನಿಗಳಿಗೆ ಸಂತಸ ತಂದಿದೆ ಎಂದು ಕನ್ನಡ ಜಾನಪದ ಸಾಹಿತ್ಯ ಪರಿಷತ್ತು ಗದಗ ಶಹರ ಘಟಕ ಅದ್ಯಕ್ಷ ಸಂಗಮೇಶ ಹಾದಿಮನಿ ಹರ್ಷ ವ್ಯಕ್ತಪಡಿಸಿದ್ದಾರೆ.
Advertisement
ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಭುವನೇಶ್ವರಿಯ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಯು ಗದಗ ಬೆಟಗೇರಿ-ಅವಳಿ ನಗರದಲ್ಲಿ ಸಂಚರಿಸಿರುವುದು ಹರ್ಷದಾಯಕವಾಗಿದೆ. ಸಮಸ್ತ ಕನ್ನಡಿಗರ ಪರವಾಗಿ ಕನ್ನಡ ಜ್ಯೋತಿ ರಥ ಯಾತ್ರೆಯನ್ನು ಸ್ವಾಗತಿಸಿದ ಗದಗ ಜಿಲ್ಲಾ ಕಸಾಪ ಅಧ್ಯಕ್ಷರಾದ ವಿವೇಕಾನಂದಗೌಡ ಪಾಟೀಲ ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಅವರು ಅಭಿನಂದನೆಗಳನ್ನು ತಿಳಿಸಿದ್ದಾರೆ.