Homecultureಶ್ರೀ ಹನುಮಂತದೇವರ ರಥೋತ್ಸವ ನಾಳೆ

ಶ್ರೀ ಹನುಮಂತದೇವರ ರಥೋತ್ಸವ ನಾಳೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಪೇಠೆ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಹಾವಳಿ ಹನುಮಂತದೇವರ ಜಾತ್ರೆಯು ನವೆಂಬರ್ 2ರ ದೀಪಾವಳಿ ಪ್ರತಿಪದೆಯ(ಪಾಡ್ಯ) ದಿವಸ ನೆರವೇರಲಿದೆ.

ಶನಿವಾರ ಮುಂಜಾನೆ ದೇವರಿಗೆ ವಿಶೇಷ ಪೂಜೆ, ಅಲಂಕಾರ ಮತ್ತು ನೈವೇದ್ಯ ಕಾರ್ಯಕ್ರಮ ನಡೆಯಲಿದ್ದು, ಸಂಜೆ 6 ಗಂಟೆಗೆ ಮಹಾರಥೋತ್ಸವ, ನ.3ರಂದು ಕಡುಬಿನ ಕಾಳಗ, ನ.4ರಂದು ಓಕುಳಿ ಜರುಗಲಿದೆ.

ರಥೋತ್ಸವ ಕಾರ್ಯಕ್ರಮದ ಸಾನ್ನಿಧ್ಯವನ್ನು ಹೂವಿನಶಿಗ್ಲಿ ವಿರಕ್ತಮಠದ ಚನ್ನವೀರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ದೇವಸ್ಥಾನ ಕಮಿಟಿ, ಹಾವಳಿ ಆಂಜನೇಯ ಭಜನಾ ಮಂಡಳಿ, ಹಿಂದೂ ಮಹಾಸಭಾ ಗಣಪತಿ ಸೇವಾ ಮಂಡಳಿ ಹಾಗೂ ಯುವಕ ಮಂಡಳಿ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img