ಮೈಸೂರು: ಇತ್ತೀಚಿಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಿಂಗೇನಾ ಅಗ್ರಹಾರದ ಫಾರ್ಮ್ ಹೌಸ್ವೊಂದರಲ್ಲಿ ರೇವ್ ಪಾರ್ಟಿ ನಡೆದಿತ್ತು. ಇದರ ಬೆನ್ನಲ್ಲೇ ಮೈಸೂರು ಹೊರವಲಯದಲ್ಲಿ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿ ಐವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
Advertisement
ಪಾರ್ಟಿಯಲ್ಲಿ ಮಾದಕ ವಸ್ತುಗಳನ್ನ ಸೇವಿಸಿ ನಶೆಯಲ್ಲಿ ಯುವತಿಯರು ತೇಲಾಡುತ್ತಿದ್ದರು. ಇಲವಾಲ ಪಿಎಸ್ಐ ಮಂಜುನಾಥ ನಾಯಕ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಪಾರ್ಟಿಯಲ್ಲಿದ್ದ 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಎಫ್ಎಸ್ಎಲ್ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದೆ.