ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಎಮ್‌ಎಲ್‌ಸಿ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂಬ ಆರೋಪ ಭಾರೀ ಚರ್ಚೆಗೆ ಗುರಿಯಾಗಿದೆ. ಇನ್ನೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,
Advertisement
ಈಗಾಗ್ಲೇ ಎಂಎಲ್ಸಿ ರವಿಕುಮಾರ್ ಅವರು ಅವರ ಹೇಳಿಕೆಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಸೋಸಿಯೇಷನ್ ನವರು ಸಿಎಂಗೆ ದೂರು ಕೊಟ್ಟಿದ್ದಾರೆ. ಆದರೆ ಖುದ್ದು ಸಿಎಂ ಅವರೇ ಸಾರ್ವಜನಿಕ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ನಡೆದುಕೊಂಡಾಗ ಆಗ ಎಲ್ಲಿ ಹೋಗಿದ್ವು ಈ ಅಸೋಸಿಯೇಷನ್ ಗಳು.? ಎಂದು ಪ್ರಶ್ನಿಸಿದ್ದಾರೆ. ಸಿಎಂ ವಿರುದ್ಧ ಯಾಕೆ ದೂರು ನೀಡಿರಲಿಲ್ಲ ಎಂದಿದ್ದಾರೆ.