ಟೀಮ್ ಇಂಡಿಯಾದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಅವರು ಹೊಸ ವಿಶ್ವದಾಖಲೆ ಬರೆದಿದ್ದಾರೆ. ಕ್ರಿಕೆಟ್ನ ದೀರ್ಘ ಸ್ವರೂಪದಲ್ಲಿ ವಿಶ್ವ ದಾಖಲೆ ಸೃಷ್ಟಿಸಿರುವ ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್‌ಗಳ ರ್ಯಾಂಕಿಂಗ್ನಲ್ಲಿ ಅತ್ಯಧಿಕ ದಿನಗಳವರೆಗೆ ಅಗ್ರಸ್ಥಾನದಲ್ಲಿ ಉಳಿಯುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಒಂದೆಡೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರೆ, ಮತ್ತೊಂದೆಡೆ ರವೀಂದ್ರ ಜಡೇಜಾ ಟೆಸ್ಟ್ ಕ್ರಿಕೆಟ್ನಲ್ಲಿ ಇತ್ತೀಚೆಗೆ ಯಾವ ಪಂದ್ಯವನ್ನು ಆಡದಿದ್ದರೂ ಇತಿಹಾಸ ಸೃಷ್ಟಿಸುತ್ತಿದ್ದಾರೆ. ವಾಸ್ತವವಾಗಿ ಐಸಿಸಿ ಇಂದು ಟೆಸ್ಟ್ ಆಲ್‌ರೌಂಡರ್‌ಗಳ ಹೊಸ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ರವೀಂದ್ರ ಜಡೇಜಾ 400 ರೇಟಿಂಗ್ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಈ ಮೂಲಕ ಜಡೇಜಾ ಐಸಿಸಿ ಟೆಸ್ಟ್ ಆಲ್‌ರೌಂಡರ್ ವಿಭಾಗದಲ್ಲಿ ಅತಿ ಹೆಚ್ಚು ದಿನಗಳ ಕಾಲ ನಂಬರ್ ಒನ್ ಸ್ಥಾನದಲ್ಲಿ ಮುಂದುವರೆದಿರುವ ಆಟಗಾರನೆಂಬ ವಿಶ್ವದಾಖಲೆ ಸೃಷ್ಟಿಸಿದ್ದಾರೆ.