ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ ಪಂದ್ಯ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಸಿಲಿಕಾನ್ ಸಿಟಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ರಾಯಚೂರು, ಕಲಬುರಗಿ, ಧಾರವಾಡ,
ದಾವಣಗೆರೆ, ಮಂಡ್ಯ, ರಾಮನಗರ, ಕೊಪ್ಪಳ ಸೇರಿದಂತೆ ರಾಜ್ಯಾದ್ಯಂತ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಹಲವೆಡೆ ಲೈವ್ ಸ್ಕ್ರೀನ್‌ನಲ್ಲಿ ಪಂದ್ಯ ವೀಕ್ಷಿಸಿದ ಫ್ಯಾನ್ಸ್ ಸಂಭ್ರಮಾಚರಣೆ ನಡೆಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ಸೆಲೆಬ್ರೇಟ್ ಮಾಡಿದರು.
ಐಪಿಎಲ್ 2025ರ ಚಾಂಪಿಯನ್ ಆಗಿರುವ ಆರ್‌ಸಿಬಿಗೆ 20 ಕೋಟಿ ರೂಪಾಯಿ ಹಣ ಬಹುಮಾನವಾಗಿ ನೀಡಲಾಗಿದೆ. ಕಳೆದ ವರ್ಷ ಕೋಲ್ಕತ್ತಾ ನೈಟ್ ರೈಡರ್ಸ್ ಚಾಂಪಿಯನ್ ಆಗಿತ್ತು.
ಸೋತ ತಂಡ ಪಂಜಾಬ್ ಕಿಂಗ್ಸ್ಗೆ 13 ಕೋಟಿ ರೂಪಾಯಿ ಬಹುಮಾನ ಸಿಕ್ಕಿದೆ. ಮುಂಬೈ ಇಂಡಿಯನ್ಸ್ ಮತ್ತು ಗುಜರಾತ್ ಟೈಟಾನ್ಸ್ ಕೂಡ ಖಾಲಿ ಕೈಯಲ್ಲಿ ಹಿಂತಿರುಗುವುದಿಲ್ಲ. ಪ್ಲೇ-ಆಫ್‌ಗೆ ಪ್ರವೇಶ ಹಿನ್ನೆಲೆಯಲ್ಲಿ ಕ್ರಮವಾಗಿ 7 ಕೋಟಿ ಮತ್ತು 6.5 ಕೋಟಿ ರೂಪಾಯಿ ಹಣ ಪಡೆದಿವೆ.
- ವಿಜೇತ ತಂಡಕ್ಕೆ – 20 ಕೋಟಿ ರೂ.
- ರನ್ನರ್ ಅಪ್ – 13 ಕೋಟಿ ರೂ.