HomeSports NewsRCB ಅಭಿಮಾನಿಗಳೇ, ಶ್ರೇಯಸ್ ಆ ರೀತಿ ಮಾಡಿಲ್ಲ.. ಆದ್ರೂ ಕಿರಿಕ್ ಕೊಹ್ಲಿ ಮಿತಿಮೀರಿದ್ದೇಕೆ?

RCB ಅಭಿಮಾನಿಗಳೇ, ಶ್ರೇಯಸ್ ಆ ರೀತಿ ಮಾಡಿಲ್ಲ.. ಆದ್ರೂ ಕಿರಿಕ್ ಕೊಹ್ಲಿ ಮಿತಿಮೀರಿದ್ದೇಕೆ?

For Dai;y Updates Join Our whatsapp Group

Spread the love

IPL 37ನೇ ಪಂದ್ಯವು ಆಟಗಾರರ ನಡುವಣ ಕಿತ್ತಾಟಕ್ಕೆ ಸಾಕ್ಷಿಯಾಗಿದೆ. ಮೊದಲಿಗೆ ವಿರಾಟ್ ಕೊಹ್ಲಿ ಹಾಗೂ ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹರ್​ಪ್ರೀತ್ ಬ್ರಾರ್ ಮಾತಿನ ಚಕಮಕಿ ನಡೆಸಿದರೆ, ಆ ಬಳಿಕ ಶ್ರೇಯಸ್ ಅಯ್ಯರ್ ಹಾಗೂ ಕಿಂಗ್ ಕೊಹ್ಲಿ ಕಿತ್ತಾಡಿಕೊಂಡಿದ್ದರು.

ಹೌದು, ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್​ಗಳ ಜಯ ಸಾಧಿಸಿದೆ. ಮುಲ್ಲನ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡದ ಪರ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 73 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್​ಸಿಬಿ ತಂಡ 18.5 ಓವರ್​ಗಳಲ್ಲಿ 159 ರನ್​ ಬಾರಿಸಿ 7 ವಿಕೆಟ್​ಗಳ ಗೆಲುವು ದಾಖಲಿಸಿತು.

ಈ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಕಿಚಾಯಿಸುವಂತೆ ಸಂಭ್ರಮಿಸಿದ್ದರು. ಇದು ಶ್ರೇಯಸ್ ಅಯ್ಯರ್ ಅವರ ಸೌಂಡ್ ಸೆಲೆಬ್ರೇಷನ್​ಗೆ ರಿಯಾಕ್ಷನ್ ಎಂದು ನೀವಂದುಕೊಂಡರೆ ನಿಮ್ಮ ಊಹೆ ತಪ್ಪು. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್ RCB RCB… ಎಂಬ ನಿಮ್ಮ ಶಬ್ದ ಕೇಳಿಸುತ್ತಿಲ್ಲ ಎಂದು ಶ್ರೇಯಸ್ ಅಯ್ಯರ್ ಯಾವುದೇ ಸನ್ನೆ ಮಾಡಿರಲಿಲ್ಲ. ಬದಲಾಗಿ ಮುಲ್ಲನ್​ಪುರ್​ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್ ಮಾಡಿದ ಸನ್ನೆಯನ್ನೇ ಎಡಿಟ್ ಮಾಡಿ ವೈರಲ್ ಮಾಡಲಾಗಿದೆ.

ಕೆಕೆಆರ್ ವಿರುದ್ಧ ಗೆದ್ದ ಬಳಿಕ ಶ್ರೇಯಸ್ ಅಯ್ಯರ್, ಪಂಜಾಬ್ ಕಿಂಗ್ಸ್ ಅಭಿಮಾನಿಗಳಿಗೆ ಸೌಂಡ್​ ಕೇಳಿಸುತ್ತಿಲ್ಲ. ಮತ್ತಷ್ಟು ಜೋರಾಗಿ ಕೂಗಿ ಎಂದಷ್ಟೇ ಸನ್ನೆ ಮಾಡಿದ್ದರು. ಈ ವಿಡಿಯೋವನ್ನು ಎಡಿಟ್ ಮಾಡಿ, ಬೆಂಗಳೂರಿನಲ್ಲಿ ಆರ್​ಸಿಬಿ ಅಭಿಮಾನಿಗಳನ್ನು ಶ್ರೇಯಸ್ ಅಯ್ಯರ್ ಕಿಚಾಯಿಸಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.

ಇದನ್ನೇ ನಂಬಿರುವ ಬಹುತೇಕ ಆರ್​ಸಿಬಿ ಅಭಿಮಾನಿಗಳು ಇದೀಗ ಶ್ರೇಯಸ್ ಅಯ್ಯರ್ ವರ್ತನೆಗೆ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ತಂಡದ ನಾಯಕ ಆರ್​ಸಿಬಿ ಅಭಿಮಾನಿಗಳನ್ನು ಕಿಚಾಯಿಸಿಲ್ಲ ಎಂಬುದೇ ಸತ್ಯ. ಇದಾಗ್ಯೂ ವಿರಾಟ್ ಕೊಹ್ಲಿ ಶ್ರೇಯಸ್ ಅಯ್ಯರ್ ಅವರನ್ನು ಟಾರ್ಗೆಟ್ ಮಾಡಿದ್ದೇಕೆ ಎಂಬುದೇ ಈಗ ಪ್ರಶ್ನೆಯಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!