RCB ಅಭಿಮಾನಿಗಳ ನೂಕುನುಗ್ಗಲು: ಗೇಟ್ ಹತ್ತಿ ಕಾಲು ಮುರಿದುಕೊಂಡ ಯುವಕ

0
Spread the love

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳ ಅಂತರದಲ್ಲಿ ಬಗ್ಗುಬಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸದ್ಯ ಬೆಂಗಳೂರಿಗೆ ಆಗಮಿಸಿದೆ. ಬೆಂಗಳೂರಿನಲ್ಲಿ ಇಂದು ಆರ್ಸಿಬಿ ವಿಜಯೋತ್ಸವ ನಡೆಯಲಿದ್ದು, ಈಗಾಗಲೇ ಆರ್ಸಿಬಿ ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ.

Advertisement

ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು, ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಗೇಟ್ ನಂಬರ್ 6ರ ಬಳಿ ಗೇಟ್ ಹತ್ತಲು ಹೋದ ಯುವಕ ಬಿದ್ದು ಕಾಲು ಮುರಿದುಕೊಂಡಿದ್ದಾನೆ.

ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.


Spread the love

LEAVE A REPLY

Please enter your comment!
Please enter your name here