• About
  • Advertise
  • Privacy & Policy
  • Contact
Sunday, November 1, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

IPL 2025: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ RCB-GT ಹೈವೋಲ್ಟೇಜ್ ಪಂದ್ಯ: ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ

Vijaya Sakshi News Desk by Vijaya Sakshi News Desk
April 1, 2025
in Sports News
IPL 2025: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ RCB-GT ಹೈವೋಲ್ಟೇಜ್ ಪಂದ್ಯ: ಈ ಜಾಗಗಳಲ್ಲಿ ವಾಹನ ನಿಲುಗಡೆ ನಿಷೇಧ
0
SHARES
3
VIEWS
Share on Facebook

ಐಪಿಎಲ್​ 2025ರ ಆವೃತ್ತಿಯನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಗೆಲುವಿನೊಂದಿಗೆ ಆರಂಭಿಸಿದೆ. ಈ ವರೆಗೂ ಆಡಿರುವ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಉದ್ಘಾಟನ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡವನ್ನು ಮಣಿಸಿದ ಆರ್​ಸಿಬಿ,

ಎರಡನೇ ಪಂದ್ಯದಲ್ಲಿ ಚೆಪಾಕ್​ ಮೈದಾನಲ್ಲಿ ಚೆನ್ನೈ ಸೂಪರ್​​ ಕಿಂಗ್ಸ್​ ತಂಡವನ್ನು ಮಣಿಸುವ ಮೂಲಕ ಸತತ ಎರಡು ಪಂದ್ಯಗಳಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದೀಗ ಮೂರನೇ ಪಂದ್ಯಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

ರಾಯಲ್​ ಚಾಲೆಂಜರ್ಸ್​ ಬೆಂಗಳೂರು vs ಗುಜರಾತ್​ ಟೈಟಾನ್ಸ್​ ನಡುವಿನ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ನಾಳೆ ನಡೆಯಲಿದೆ. ಇದಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರೂ ಸಿದ್ಧತೆ ಮಾಡಿಕೊಂಡಿದ್ದಾರೆ. ವಾಹನ ನಿಲುಗಡೆ, ವಾಹನ ನಿಲುಗಡೆ ನಿಷೇಧ ವಿವರವನ್ನು ಹಂಚಿಕೊಂಡಿದ್ದಾರೆ.

ಸ್ಟೇಡಿಯಂ ಸುತ್ತಮುತ್ತ ಸಂಚಾರ ದಟ್ಟಣೆ ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬುಧವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸ್ಟೇಡಿಯಂ ಸುತ್ತಮುತ್ತ ನೋ ಪಾರ್ಕಿಂಗ್ ಇರಲಿದೆ. ಪಂದ್ಯ ವೀಕ್ಷಿಸಲು ಬರುವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಕ್ರೀಡಾಂಗಣ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳ ಕೊರತೆ ಇರುವುದರಿಂದ ಬಿಎಂಟಿಸಿ,‌ ಮೆಟ್ರೋ ಬಳಸಲು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಓಲಾ, ಉಬರ್, ಆಟೋ ಇತ್ಯಾದಿ ಕ್ಯಾಬ್‌ಗಳು ಪಿಕ್ ಆಪ್ ಮತ್ತು ಡ್ರಾಪ್ ಮಾಡಲು ಸ್ಥಳ ನಿಗದಿಪಡಿಸಲಾಗಿದೆ.

ಎಲ್ಲೆಲ್ಲಿ ವಾಹನಗಳ ನಿಲುಗಡೆ ನಿಷೇಧ?

  • ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ ಪಾರ್ಕಿಂಗ್ ನಿಷೇಧಿಸಲಾಗಿದೆ.
  • ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ನೋ ಪಾರ್ಕಿಂಗ್ ಇರಲಿದೆ.
  • ರಾಜಭವನ ರಸ್ತೆಯ ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ ಪಾರ್ಕಿಂಗ್​ಗೆ ಅನುಮತಿ ಇಲ್ಲ.
  • ಸೆಂಟ್ರಲ್ ಸ್ಟ್ರಿಟ್ ರಸ್ತೆಯ ಎರಡೂ ಕಡೆ ನೋ ಪಾರ್ಕಿಂಗ್.
  • ಕಬ್ಬನ್ ರಸ್ತೆಯಲ್ಲಿ ಸಿ.ಟಿ.ಓ. ವೃತ್ತದಿಂದ ಡಿಕೆನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ ವಾಹನ ನಿಲುಗಡೆಗೆ ಅವಕಾಶ ಇಲ್ಲ.
  • ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್​ನಿಂದ ಅನಿಲ್ ಕುಂಬ್ಳೆ ವೃತ್ತದ ವರೆಗೆ ಪಾರ್ಕಿಂಗ್​ ಮಾಡುವಂತಿಲ್ಲ.
  • ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶಿರ್ವಾದಂ ವೃತ್ತದ ವರೆಗೆ ಪಾರ್ಕಿಂಗ್​ಗೆ ಅನುಮತಿಸಲಾಗುವುದಿಲ್ಲ.
  • ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ ನೋ ಪಾರ್ಕಿಂಗ್.
  • ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ ವಾಹನ ನಿಲುಗಡೆ ನಿಷೇಧಿಸಲಾಗಿದೆ.
  • ಲ್ಯಾವೆಲ್ಲೆ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ವಿಠಲ್ ಮಲ್ಯ ರಸ್ತೆ ಜಂಕ್ಷನ್‌ವರೆಗೆ ಹಾಗೂ ವಿಠಲ್ ಮಲ್ಯ ರಸ್ತೆಯ ಸಿದ್ದಲಿಂಗಯ್ಯ ವೃತ್ತದಿಂದ ಸೆಂಟ್ ಮಾರ್ಕ್ಸ್ ರಸ್ತೆಯ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಎಲ್ಲೆಲ್ಲಿ ಪಾರ್ಕಿಂಗ್​ಗೆ ಅವಕಾಶ?

  • ಪಂದ್ಯ ವೀಕ್ಷಣೆ ಮಾಡಲು ಬರುವವರಿಗೆ ಸೆಂಟ್ ಜೋಸೆಫ್ ಹೈಸ್ಕೂಲ್ ಗ್ರೌಂಡ್ ಹಾಗೂ ಯು.ಬಿ.ಸಿಟಿ ನಿಲುಗಡೆ ಸ್ಥಳದಲ್ಲಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
  • ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ಪಾರ್ಕಿಂಗ್ ಇದೆ.
  • ಕೆ.ಎಸ್.ಸಿ.ಎ. ಸದಸ್ಯರ ವಾಹನಗಳನ್ನು ಸೆಂಟ್ ಜೋಸೆಫ್ ಬಾಲಕರ ಶಾಲೆ ಮೈದಾನದಲ್ಲಿ ನಿಲ್ಲಿಸಲು ಸೂಚಿಸಲಾಗಿದೆ.

Tags: BreakingNewsChinnaswamy StadiumGtIPL 2025KarnatakaOnlineNewsKannadaRCBVijayasakshivijayasakshinews
ShareSendShare
Previous Post

ಐಸ್ ಕ್ರೀಂನೊಂದಿಗೆ ಬರುವ ರುಚಿಗಳನ್ನು ಸ್ವೀಕರಿಸಿ, ಪರಿಸ್ಥಿತಿಗೆ ಅನುಗುಣವಾಗಿ ಮುಂದುವರಿಯಬೇಕು: ನಟ ವಿಜಯ್ ವರ್ಮ

Next Post

IPL ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದಂತೆ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
HD ದೇವೇಗೌಡರ ಕುಟುಂಬವನ್ನು ನಿಂದಿಸುವ ಸಮಾವೇಶ ಮಾಡಿದ್ದಾರೆ: ನಿಖಿಲ್ ಕುಮಾರಸ್ವಾಮಿ

IPL ಪಂದ್ಯದಲ್ಲಿ ಬ್ಯಾಟಿಂಗ್ ಮಾಡಿದಂತೆ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ ಕಿಡಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

November 1, 2026
ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

November 1, 2026
ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

ಪ್ರೀತಿಸುವಂತೆ ಯುವಕನಿಂದ ನಿರಂತರ ಕಿರುಕುಳ ಆರೋಪ: ವಿಷ ಸೇವಿಸಿ 23 ವರ್ಷದ ಯುವತಿ ಆತ್ಮಹತ್ಯೆ!

November 1, 2026
ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

ಕನ್ನಡ ಬಾವುಟ ಹಾರಿಸುವುದನ್ನು ಕಡ್ಡಾಯಗೊಳಿಸುವ ಚಿಂತನೆ: ಸಿಎಂ ಡಿ ಕೆ ಶಿವಕುಮಾರ್

November 1, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

ಭಾರತ-ನ್ಯೂಜಿಲೆಂಡ್ 5ನೇ ಟಿ20 ಪಂದ್ಯ ಆರಂಭ! ಟಾಸ್ ಗೆದ್ದ ಕಿವೀಸ್ ಬೌಲಿಂಗ್ ಆಯ್ಕೆ, ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ

November 1, 2026
ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

ನಾನು ಅಪಘಾತ ಮಾಡಿ ಓಡಿ ಹೋಗುವವನಲ್ಲ, ಡಿಕ್ಕಿ ಹೊಡೆದಿದ್ದೇ ಗೊತ್ತಾಗಿಲ್ಲ: ಹಿಟ್ ಆ್ಯಂಡ್ ರನ್ ಆರೋಪಕ್ಕೆ ನಿಖಿಲ್ ರವೀಂದ್ರ ಸ್ಪಷ್ಟನೆ

November 1, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper