HomeSports Newsಮುಂಬೈ ವಿರುದ್ಧ ಮಹತ್ವದ ಪಂದ್ಯಕ್ಕೆ RCB ಸಜ್ಜು; ಪ್ಲೇಯಿಂಗ್ 11ನಲ್ಲಿ ಎರಡು ದೊಡ್ಡ ಬದಲಾವಣೆ

ಮುಂಬೈ ವಿರುದ್ಧ ಮಹತ್ವದ ಪಂದ್ಯಕ್ಕೆ RCB ಸಜ್ಜು; ಪ್ಲೇಯಿಂಗ್ 11ನಲ್ಲಿ ಎರಡು ದೊಡ್ಡ ಬದಲಾವಣೆ

For Dai;y Updates Join Our whatsapp Group

Spread the love

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ. ರಾಯ್‌ಪುರದಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯಕ್ಕಾಗಿ ಆರ್‌ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಹೆಚ್ಚಿದೆ.

ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್‌ಸಿಬಿ, ಕಳೆದ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ವಿಶೇಷವಾಗಿ ಬ್ಯಾಟಿಂಗ್ ವಿಭಾಗದ ವೈಫಲ್ಯ ತಂಡಕ್ಕೆ ಹಿನ್ನಡೆಯಾಗಿದ್ದು, ರೊಮಾರಿಯೊ ಶೆಫರ್ಡ್ ಹಾಗೂ ಜಿತೇಶ್ ಶರ್ಮಾ ಅವರ ಕಳಪೆ ಫಾರ್ಮ್ ತಂಡದ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಈ ಇಬ್ಬರನ್ನು ಆಡುವ ಬಳಗದಿಂದ ಹೊರಗಿಡುವ ಸಾಧ್ಯತೆ ಇದೆ.

ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಹಾಗೂ ಜೇಕಬ್ ಬೆಥೆಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಮೂರನೇ ಕ್ರಮಾಂಕದಲ್ಲಿ ದೇವದತ್ ಪಡಿಕ್ಕಲ್ ಬ್ಯಾಟಿಂಗ್ ನಡೆಸಲಿದ್ದು, ನಾಲ್ಕನೇ ಕ್ರಮಾಂಕದಲ್ಲಿ ನಾಯಕ ರಜತ್ ಪಾಟಿದಾರ್ ಕಾಣಿಸಿಕೊಳ್ಳಲಿದ್ದಾರೆ.

ಐದನೇ ಕ್ರಮಾಂಕದಲ್ಲಿ ಟಿಮ್ ಡೇವಿಡ್ ಬ್ಯಾಟಿಂಗ್ ಮಾಡಲಿದ್ದು, ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜೋರ್ಡನ್ ಕಾಕ್ಸ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಆಲ್‌ರೌಂಡರ್ ಆಗಿ ಕೃನಾಲ್ ಪಾಂಡ್ಯ ತಂಡದಲ್ಲಿ ಇರಲಿದ್ದು, ರೊಮಾರಿಯೊ ಶೆಫರ್ಡ್ ಬದಲಿಗೆ ಫಿನಿಶರ್ ಪಾತ್ರದಲ್ಲಿ ವೆಂಕಟೇಶ್ ಅಯ್ಯರ್ ಅವಕಾಶ ಪಡೆಯುವ ಸಾಧ್ಯತೆ ಇದೆ.

ಬೌಲಿಂಗ್ ವಿಭಾಗದಲ್ಲಿ ಜೋಶ್ ಹೇಝಲ್‌ವುಡ್, ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ದಾರ್ ಸ್ಥಾನ ಪಡೆಯಲಿದ್ದಾರೆ. ಇಂಪ್ಯಾಕ್ಟ್ ಪ್ಲೇಯರ್ ಆಗಿ ಸುಯಶ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆ ಇದೆ.

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ ಇಲೆವೆನ್:
ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ಜೋರ್ಡನ್ ಕಾಕ್ಸ್ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಜೋಶ್ ಹೇಝಲ್‌ವುಡ್, ಭುವನೇಶ್ವರ್ ಕುಮಾರ್, ರಾಸಿಖ್ ದಾರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!