IPL 2025: ಚಿನ್ನಸ್ವಾಮಿ ಮೈದಾನದಲ್ಲಿ RCBಗೆ ಮತ್ತೆ ಸೋಲು: ಕ್ಯಾಪ್ಟನ್ ರಜತ್ ಪಾಟೀದಾರ್ ಹೇಳಿದ್ದೇನು..?

0
Spread the love

ಐಪಿಎಲ್ 2025ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರನ್ನು 14 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 95 ರನ್‌ಗಳಿಗೆ ನಿರ್ಬಂಧಿಸಿದ ಪಂಜಾಬ್ ತಂಡ, 12.1 ಓವರ್‌ಗಳಲ್ಲಿ ಐದು ವಿಕೆಟ್‌ಗಳ ನಷ್ಟಕ್ಕೆ ಗುರಿಯನ್ನು ತಲುಪಿತು. ಪಂಜಾಬ್ ಪರ ನೆಹಾಲ್ ವಾಧೇರಾ ಅಜೇಯ 33 ರನ್ ಗಳಿಸಿ ಅತ್ಯುತ್ತಮ ಪ್ರದರ್ಶನ ನೀಡಿದರು.

Advertisement

ಆರ್‌ಸಿಬಿ ಪರ ಜೋಶ್ ಹ್ಯಾಜಲ್‌ವುಡ್ 14 ರನ್‌ಗಳಿಗೆ ಮೂರು ವಿಕೆಟ್ ಕಿತ್ತರು. ಭುವನೇಶ್ವರ್ ಕುಮಾರ್ ಎರಡು ವಿಕೆಟ್ ಪಡೆದರು. ಮಳೆಯಿಂದ ಬಾಧಿತವಾದ 14 ಓವರ್‌ಗಳ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿತು.

ಇನ್ನೂ ಈ ಸೋಲಿನ ಬಳಿಕ ಮಾತನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ನಮ್ಮ ಪರಾಜಯಕ್ಕೆ ಪಿಚ್ ಕಾರಣ ಎಂದಿದ್ದಾರೆ. ಏಕೆಂದರೆ ಈ ಪಿಚ್​ನಲ್ಲಿ ಬ್ಯಾಟಿಂಗ್ ಮಾಡುವುದು ತುಂಬಾ ಕಷ್ಟಕರವಾಗಿತ್ತು. ಹೀಗಾಗಿ ನಮ್ಮ ಬ್ಯಾಟರ್​ಗಳು ಕಳಪೆ ಪ್ರದರ್ಶನ ನೀಡಿದ್ದಾರೆ.

ಇಂತಹ ಪಿಚ್​ನಲ್ಲಿ ಜೊತೆಯಾಟವಾಡುವುದು ಮುಖ್ಯವಾಗಿತ್ತು. ಆದರೆ ನಮ್ಮಿಂದ ಅದು ಸಾಧ್ಯವಾಗಲಿಲ್ಲ. ನಾವು ಬೇಗನೆ ವಿಕೆಟ್​ಗಳನ್ನು ಕಳೆದುಕೊಂಡ ಪರಿಣಾಮ, ಉತ್ತಮ ಜೊತೆಯಾಟ ಮೂಡಿಬಂದಿರಲಿಲ್ಲ. ಇದು ಮುಂಬರುವ ಪಂದ್ಯಗಳೀಗೆ ನಮಗೆ ಪಾಠ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಅವರನ್ನು ಕಣಕ್ಕಿಳಿಸದಿರುವ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ತಂಡದಲ್ಲಿ ಪಡಿಕ್ಕಲ್ ಬದಲಿಗೆ ಬೇರೆಯವನರನ್ನು ಕಣಕ್ಕಿಳಿಸಿದ್ದೆವು. ಆದರೆ ಅದು ಪರಿಣಾಮಕಾರಿಯಾಗಲಿಲ್ಲ ಎಂದರು.

 


Spread the love

LEAVE A REPLY

Please enter your comment!
Please enter your name here