ನಾಳೆ ಆರ್ ಸಿಬಿ-ಪಂಜಾಬ್ ಫೈನಲ್ ಮ್ಯಾಚ್: ಟ್ರೋಫಿ ಗೆಲ್ಲಲು ಬೆಂಗಳೂರು ತಂಡದ ಪ್ಲೇಯಿಂಗ್ 11 ಹೇಗಿದೆ?

0
Spread the love

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಾಳೆ ಅಂದ್ರೆ ಮಂಗಳವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಪಂದ್ಯ ನಡೆಯಲಿದೆ.

Advertisement

ಆರ್‌ಸಿಬಿ ತಂಡ ಆರಂಭದಿಂದಲೂ ಉತ್ತಮ ಫಾರ್ಮ್‌ನಲ್ಲಿದ್ದು, 19 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದೆ. ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡೂ ವಿಭಾಗವೂ ಅತ್ಯಂತ ಬಲಿಷ್ಠವಾಗಿ ಕಾಣುತ್ತಿದೆ. ಆದಾಗ್ಯೂ ಫೈನಲ್ ಪಂದ್ಯಕ್ಕೆ ಗೇಮ್ ಫಿನಿಶರ್ ಟಿಮ್ ಡೇವಿಡ್ ಲಭ್ಯರಿರುತ್ತಾರೋ, ಇಲ್ಲವೋ ಎಂಬುದೇ ಅಭಿಮಾನಿಗಳ ಚಿಂತೆಯನ್ನು ಹೆಚ್ಚಿಸಿದೆ.

ತಂಡದ ಸ್ಫೋಟಕ ಆಲ್‌ರೌಂಡರ್ ಟಿಮ್ ಡೇವಿಡ್ ಅವರ ಇಂಜುರಿ ಆರ್‌ಸಿಬಿಗೆ ಕಳವಳಕಾರಿ ವಿಷಯವಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಲೀಗ್ ಪಂದ್ಯದಲ್ಲಿ ಗಾಯಗೊಂಡಿದ್ದ ಡೇವಿಡ್, ಅಂದಿನಿಂದ ಪ್ಲೇಯಿಂಗ್ 11ನಲ್ಲಿ ಕಾಣಿಸಿಕೊಂಡಿಲ್ಲ. ಆದಾಗ್ಯೂ ಫೈನಲ್ ಪಂದ್ಯಕ್ಕೆ ಅವರು ಲಭ್ಯವಾಗುವ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಡೇವಿಡ್ ಲಭ್ಯತೆಯ ಬಗ್ಗೆ ಮಾಹಿತಿ ನೀಡಿದ ನಾಯಕ ರಜತ್ ಪಾಟಿದರ್, ಡೇವಿಡ್​ ವೈದ್ಯಕೀಯ ಸಿಬ್ಬಂದಿಯ ಮೇಲ್ವಿಚಾರಣೆಯಲ್ಲಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ಅಧಿಕಾರಿಗಳು ಡೇವಿಡ್ ಲಭ್ಯತೆಯ ಬಗ್ಗೆ ನಮಗೆ ಮಾಹಿತಿ ನೀಡಲಿದ್ದಾರೆ. ಅಲ್ಲಿಯವರೆಗೂ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ವಿರಾಟ್ ಕೊಹ್ಲಿ , ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್/ ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹೇಜಲ್‌ವುಡ್, ಸುಯಶ್ ಶರ್ಮಾ.

ಇಂಪ್ಯಾಕ್ಟ್ ಪ್ಲೇಯರ್; ಮಯಾಂಕ್ ಅಗರ್ವಾಲ್..


Spread the love

LEAVE A REPLY

Please enter your comment!
Please enter your name here