ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಸಂಗ ನಡೆದ ಬಳಿಕ ರಾಯಲ್ ಚಾಲೆಂಜರ್ಸ್ ಫ್ರಾಂಚೈಸಿಯು ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಪೋಸ್ಟ್ ಹಾಕಿರಲಿಲ್ಲ. ಇದೀಗ ಆರ್ ಸಿಬಿ ಕೇರ್ಸ್ ಪ್ರಕಟಿಸಿ ಸಂತ್ರಸ್ತರ ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಘೋಷಿಸಿದೆ. ಅದರ ಬೆನ್ನಲ್ಲೇ ವಿರಾಟ್ ಕೊಹ್ಲಿ ಅವರು ಸಹ ಫ್ರಾಂಚೈಸಿಯ ಟ್ವೀಟರ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಜೂನ್ 4 ರಂದು ನಡೆದ ಹೃದಯವಿದ್ರಾವಕ ಘಟನೆಯನ್ನು ನಾವು ಜೀವನದಲ್ಲೇ ನಿರೀಕ್ಷಿಸಿರಲಿಲ್ಲ. ನಮ್ಮ ಫ್ರಾಂಚೈಸಿಯ ಇತಿಹಾಸದಲ್ಲಿ ಅತ್ಯಂತ ಸಂತೋಷದಾಯಕ ಕ್ಷಣವಾಗಿರಬೇಕಾಗಿತ್ತು, ಆದರೆ ದುರಂತವಾಗಿ ಮಾರ್ಪಟ್ಟಿತು. ನಾವು ಕಳೆದುಕೊಂಡವರ ಕುಟುಂಬಗಳಿಗಾಗಿ ಮತ್ತು ಗಾಯಗೊಂಡ ನಮ್ಮ ಅಭಿಮಾನಿಗಳ ಬಗ್ಗೆ ಯೋಚಿಸುತ್ತಿದ್ದೇನೆ ಮತ್ತು ಪ್ರಾರ್ಥಿಸುತ್ತಿದ್ದೇನೆ.
ನಿಮ್ಮ ನಷ್ಟವು ಈಗ ನಮ್ಮ ಕಥೆಯ ಭಾಗವಾಗಿದೆ. ಒಟ್ಟಾಗಿ, ನಾವು ಕಾಳಜಿ, ಗೌರವ ಮತ್ತು ಜವಾಬ್ದಾರಿ ಯೊಂದಿಗೆ ಮುಂದುವರಿಯುತ್ತೇವೆ ಎಂದು ವಿರಾಟ್ ಕೊಹ್ಲಿ ಹೇಳಿದ್ದನ್ನು ಉಲ್ಲೇಖಿಸಿ ಆರ್ಸಿಬಿ ಪೋಸ್ಟ್ವೊಂದನ್ನು ಹಂಚಿಕೊಂಡಿದೆ.



