ಬೆಂಗಳೂರು: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ ಆಗಮಿಸಲಿದೆ.
Advertisement
ಇನ್ನೂ ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ತೆರೆದ ಬಸ್‌ನಲ್ಲಿ ಆರ್‌ಸಿಬಿ ವಿಜಯೋತ್ಸವ ಇಲ್ಲ. ಆರ್‌ಸಿಬಿ ಆಟಗಾರರು ಬಸ್ಸಿನಲ್ಲಿ ಬಂದು ಬಸ್ಸಿನಲ್ಲಿ ಹೋಗುತ್ತಾರೆ ಎಂದರು.
ಅದಲ್ಲದೆ ಗೃಹ ಇಲಾಖೆ ಒಪ್ಪದ ಕಾರಣ ಪರೇಡ್‌ಗೆ ಬ್ರೇಕ್ ಹಾಕಲಾಗಿದೆ. ಪೊಲೀಸ್ ಕಮೀಷನರ್ ಪರೇಡ್‌ಗೆ ಒಪ್ಪಿಲ್ಲ. ವಿಧಾನಸೌಧ ಹಾಗೂ ಹೈಕೋರ್ಟ್ ಭದ್ರತೆ ದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.