RCB Vs CSK: ಇಂದು ಬೆಂಗಳೂರು Vs ಚೆನ್ನೈ ಹೈವೋಲ್ಟೇಜ್ ಮ್ಯಾಚ್: ಪಂದ್ಯ ರದ್ದಾಗುವ ಭೀತಿ?

0
Spread the love

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಐಪಿಎಲ್ ಪಂದ್ಯ ನಡೆಯಲಿದ್ದು, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಆದರೆ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಭೀತಿ ಎದುರಾಗಿದೆ.

Advertisement

ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ಇಂದು ಕೂಡ ನಗರದಲ್ಲಿ ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇದ್ದು, ಸಂಜೆ ಮಳೆ ಸುರಿಯುವ ಸಾಧ್ಯತೆ ಇದೆ. ಶುಕ್ರವಾರದ ಅಭ್ಯಾಸದ ಶಿಬಿರಕ್ಕೂ ಮಳೆ ಅಡ್ಡಿಪಡಿಸಿತ್ತು. ಶನಿವಾರ ಕೂಡ ಮಳೆ ಮುನ್ಸೂಚನೆ ಇದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಕಳೆದ ತಿಂಗಳು ತವರಲ್ಲಿ ಪಂಜಾಬ್‌ ವಿರುದ್ಧ ಆರ್‌ಸಿಬಿ ಹ್ಯಾಟ್ರಿಕ್‌ ಮುಖಭಂಗ ಅನುಭವಿಸಿತ್ತು. ಆಗ ಕೂಡ ಬೆಂಗಳೂರಲ್ಲಿ ಮಳೆಯಾಗಿತ್ತು. ಪರಿಣಾಮ ಓವರ್‌ಗಳನ್ನು ಕಡಿತಗೊಳಿಸಿ ತಡವಾಗಿ ಪಂದ್ಯ ನಡೆಸಲಾಗಿತ್ತು. ಮಳೆ ಬಾದಿತ ಪಂದ್ಯದಲ್ಲಿ ಆರ್‌ಸಿಬಿ ಸೋತಿತ್ತು.

ಆಡಿರುವ 10 ಪಂದ್ಯಗಳ ಪೈಕಿ 7 ರಲ್ಲಿ ಗೆದ್ದಿರುವ ಆರ್‌ಸಿಬಿ ಪ್ಲೇ-ಆಫ್‌ ಸನಿಹದಲ್ಲಿದೆ. ಈ ಆವೃತ್ತಿಯಲ್ಲಿ ಬದ್ಧ ವೈರಿ ಜೊತೆಗಿನ 2ನೇ ಪಂದ್ಯದಲ್ಲೂ ಆರ್‌ಸಿಬಿ ಗೆದ್ದರೆ ಪ್ಲೇ-ಆಫ್‌ ಸ್ಥಾನ ಬಹುತೇಕ ಖಚಿತವಿದೆ. 5 ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಚೆನ್ನೈ ಈಗಾಗಲೇ ಪ್ಲೇ-ಆಫ್‌ ರೇಸ್‌ನಿಂದ ಹೊರಬಿದ್ದಿದೆ. ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.


Spread the love

LEAVE A REPLY

Please enter your comment!
Please enter your name here